October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಚಲಿಸುತ್ತಿದ್ದ ವಾಹನಗಳ ವಿರುದ್ಧ ಇಂದು ಆಗಸ್ಟ್ 25ರಂದು ಮಂಗಳವಾರ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ದಂಡ ವಿಧಿಸಿದ್ದಾರೆ.

ಸಾರ್ವಜನಿಕರು ಯಾವುದೇ ಹಬ್ಬ-ಹರಿದಿನಗಳು, ಉತ್ಸವಗಳು, ರ‍್ಯಾಲಿ ಅಥವಾ ಖಾಸಗಿ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದರೆ ಸಹಿಸುವುದಿಲ್ಲ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಂಚಾರ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page