October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಯಿತು.


ಆಗಸ್ಟ್ 23ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿದ್ದು, ಭರತನಾಟ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಶಾನ್ವಿ ಪೂಜಾರಿ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಕರಾಟೆ ಪಟು ಶ್ರೇಯಸ್ ಪೂಜಾರಿ ಅವರು ಪ್ರಶಸ್ತಿಗೆ ಭಾಜನರಾದರು.


ದೇಶಭಕ್ತಿ, ಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಡಂತ್ಯಾರಿನ ಈ ಇಬ್ಬರು ಪ್ರತಿಭೆಗಳು ಖ್ಯಾತ ಉದ್ಯಮಿ ಶ್ರೇಯಸ್ ಇಂಜಿನಿಯರಿಂಗ್ ವರ್ಕ್ಸ್‌ನ ಮಾಲೀಕ ಯೋಗೀಶ್ ಪೂಜಾರಿ ಹಾಗೂ ಶಕುಂತಳಾ ದಂಪತಿಯ ಮಕ್ಕಳು. ಇಬ್ಬರ ಸಾಧನೆಗೆ ದೊರೆತ ಈ ಗೌರವವು ಮಡಂತ್ಯಾರು ಮಾತ್ರವಲ್ಲದೆ ಇಡೀ ಪರಿಸರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾದಂತಾಗಿದೆ.

 

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page