August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್‌ಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಕಾನೂನು ಮಾಹಿತಿ ಹಾಗೂ ಆರೋಗ್ಯ ಶಿಬಿರ, ಭಜನೋತ್ಸವ, ಮನೆ-ಮನೆ ಭಜನೆ, ಸತ್ಸಂಗ, ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ರಾಷ್ಟ್ರೀಯ ದಿನಾಚರಣೆ ಹಾಗೂ ವಿವಿಧ ಹಬ್ಬ-ಹರಿದಿನಗಳ ಆಚರಣೆ ಸೇರಿದಂತೆ ಹಲವು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದರು.

ಭಜನಾ ಪರಿಷತ್‌ನ ಚಟುವಟಿಕೆಗಳು ಸಮಾಜದಲ್ಲಿ ಧಾರ್ಮಿಕ ಜಾಗೃತಿ ಹಾಗೂ ಸಂಸ್ಕಾರಯುತ ಪರಿವರ್ತನೆಗೆ ಕಾರಣವಾಗುತ್ತಿವೆ. ಈ ವರ್ಷದ ಭಜನಾ ಕಮ್ಮಟದ ಪೂರ್ವತಯಾರಿಗಳು ರಾಜ್ಯದಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ಅವರು ಹೇಳಿದರು.

ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಾದ್ಯಂತ ಭಜನಾ ಪರಿಷತ್ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಭಜನಾ ತರಬೇತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಈಗಾಗಲೇ ರಾಜ್ಯ ಭಜನಾ ಪರಿಷತ್ ಪದಾಧಿಕಾರಿಗಳ ಸಭೆಯನ್ನೂ ನಡೆಸಲಾಗಿದೆ ಎಂದು ತಿಳಿಸಿದರು.

ಶಿಬಿರಾರ್ಥಿಗಳ ನೋಂದಣಿ ಆರಂಭ:

28ನೇ ವರ್ಷದ ಭಜನಾ ಕಮ್ಮಟದ ಶಿಬಿರಾರ್ಥಿಗಳ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಮಟ್ಟದಲ್ಲಿ ಭಜನಾ ಪರಿಷತ್ ಸಭೆಗಳು ನಡೆಯುತ್ತಿವೆ. ಸೆಪ್ಟೆಂಬರ್ 27ರಂದು ಮಧ್ಯಾಹ್ನ 2.30ರಿಂದ ಶಿಬಿರಾರ್ಥಿಗಳ ನೋಂದಣಿ ಆರಂಭವಾಗಲಿದೆ ಎಂದು ತಿಳಿಸಲಾಯಿತು. ಸಭೆಯಲ್ಲಿ ಕಮ್ಮಟದ ವಸತಿ ವ್ಯವಸ್ಥೆ, ಉದ್ಘಾಟನಾ ಸಮಾರಂಭ, ನಗರ ಭಜನೆ, ಸಾಧಕ ಭಜನಾ ಮಂಡಳಿಗಳ ಆಯ್ಕೆ, ಸಂಪನ್ಮೂಲ ವ್ಯಕ್ತಿಗಳ ಭಾಗವಹಿಸುವಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಕ್ಟೋಬರ್ 4ರಂದು ನಡೆಯಲಿರುವ ಭಜನೋತ್ಸವ ಮತ್ತು ಸಮಾರೋಪ ಸಮಾರಂಭದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ವಿವಿಧ ಜವಾಬ್ದಾರಿಗಳ ನಿರ್ವಹಣೆಗೆ ಪೂರಕ ಸಮಿತಿಗಳನ್ನೂ ರಚಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್ ವಹಿಸಿದ್ದರು. ವೇದಿಕೆಯಲ್ಲಿ ಸೀತಾರಾಮ ತೋಳ್ಪಾಡಿತ್ತಾಯ, ಬಿ. ಭುಜಬಲಿ, ಲಕ್ಷ್ಮೀನಾರಾಯಣ ರಾವ್, ಪಾರ್ಶ್ವನಾಥ್ ಜೈನ್, ಮಹಾವೀರ ಅಜ್ರಿ, ಕೇಶವ ಪಿ., ಡಾ. ಶಶಿಕಾಂತ್ ಜೈನ್, ರತ್ನವರ್ಮ ಜೈನ್ ಹಾಗೂ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಭಜನಾ ಕಮ್ಮಟದ ವಿವಿಧ ಉಪಸಮಿತಿಗಳ ಪ್ರಮುಖರು, ಊರಿನ ಮಹನೀಯರು ಹಾಗೂ ಕನ್ಯಾಕುಮಾರಿ ಯುವತಿ ಮಂಡಲದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಪವಿತ್ರ ಸುನಿಲ್ ಸ್ವಾಗತಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ

You cannot copy content of this page