August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಕ್ಕಾಡ್ ಅನಾಕಡಿ ನಿವಾಸಿ ಧನೇಶ್ ಅವರ ಪುತ್ರ 15 ವರ್ಷ ಪ್ರಾಯದ ಸನೂಪ್ ಎಂದು ಗುರುತಿಸಲಾಗಿದೆ. ಸನೂಪ್ ತಿಮಿರಿ ಕುಟ್ಟಮ್ಮತ್ತು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ ನಡೆದ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಸನೂಪ್ ಭಾಗವಹಿಸಿದ್ದ. ಕಾರ್ಯಕ್ರಮದ ವೇಳೆ ತನ್ನ ಸಹಪಾಠಿಗಳೊಂದಿಗೆ ಹೊರಗೆ ಬಂದಿದ್ದಾಗ, ಸಮೀಪದಲ್ಲಿದ್ದ ಮುಚ್ಚಳವಿಲ್ಲದ ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸನೂಪ್‌ನನ್ನು ತಕ್ಷಣವೇ ಕಣ್ಣೂರಿನ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 28ರಂದು ಶುಕ್ರವಾರ ಸಂಜೆ ಸನೂಪ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಓಣಂ ಆಚರಣೆಯ ಸಂಭ್ರಮದಲ್ಲಿದ್ದ ಕುಟುಂಬ ಮತ್ತು ಸ್ನೇಹಿತರಿಗೆ ಈ ದುರ್ಘಟನೆ ತೀವ್ರ ಆಘಾತ ಉಂಟುಮಾಡಿದೆ.

You may also like

News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in
News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ

You cannot copy content of this page