August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ

ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಆಗಸ್ಟ್ 30ರಂದು ಭಾನುವಾರ ಪೊಲೀಸ್ ಪಥಸಂಚಲನ ನಡೆಸಲಾಗಿದೆ.

ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್:

ಪುತ್ತೂರು ಚಲೋ ಕಾರ್ಯಕ್ರಮದ ಭದ್ರತೆಗಾಗಿ ಒಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಒಬ್ಬರು ಡಿವೈಎಸ್‌ಪಿ, ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 10 ಮಂದಿ ಪಿಎಸ್‌ಐಗಳು ಹಾಗೂ 14 ಮಂದಿ ಎಎಸ್‌ಐಗಳನ್ನು ನಿಯೋಜಿಸಲಾಗಿದೆ. ಇದರೊಂದಿಗೆ 139 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೆಚ್ಚುವರಿ ಭದ್ರತಾ ವ್ಯವಸ್ಥೆಯ ಭಾಗವಾಗಿ 5 ಕೆಎಸ್‌ಆರ್‌ಪಿ ತುಕಡಿಗಳು, 2 ಎಸ್‌ಎಎಫ್ ತಂಡಗಳು ಹಾಗೂ 7 ಡಿಎಆರ್ ತುಕಡಿಗಳನ್ನು ಸಹ ನಿಯೋಜಿಸಲಾಗಿದೆ.

ಪುತ್ತೂರು ನಗರದಲ್ಲಿ ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯುವಂತೆ ಅಗತ್ಯವಿರುವ ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page