ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ
ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಅಖಿಲ ಭಾರತ ಕ್ರೈಸ್ತ ಮಹಾಸಭಾ (ನೋಂದಾಯಿತ) ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾರ್ಮಿನ್ ಲೂಯಿಸ್ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಕ್ರೈಸ್ತ ಸಮುದಾಯದ ಸದಸ್ಯರು ಮನವಿ ಸಲ್ಲಿಸಿದರು.


ಆಗಸ್ಟ್ 29ರಂದು ಶನಿವಾರ ಬೈಂದೂರು ತಾಲೂಕು ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ನಿಯೋಗ, ಬಳಿಕ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಚೇರಿಗೂ ಭೇಟಿ ನೀಡಿ, ಸೆಪ್ಟೆಂಬರ್ 8ರಂದು ಕ್ರೈಸ್ತ ಧರ್ಮದ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ ಮಾಡಿತು.


ಈ ಸಂದರ್ಭದಲ್ಲಿ ಬೈಂದೂರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀಫನ್ ಡಯಾಸ್, ಕಾರ್ಯದರ್ಶಿ ವೀಣಾ ಜೋಸೆಫ್ ಫೆರ್ನಾಂಡಿಸ್, ಸಂಯೋಜಕಿ ಜೊಸ್ಪಿನ್ ರೊಡ್ರಿಗಸ್, ಆಶಾ ಡಯಾಸ್, ಜ್ಯೋತಿ ಫೆರ್ನಾಂಡಿಸ್, ಐಡಾ ಡಯಾಸ್, ಸ್ಟೀಫನ್ ರಾಜ್ ಫೆರ್ನಾಂಡಿಸ್ ಹಾಗೂ ಟ್ರೆಸಿಲ್ಲಾ ಕ್ರಾಸ್ತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.



