September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಶಿನೀರ ಬಾನು ಅವರು ಜಿಲ್ಲಾಧ್ಯಕ್ಷೆಯಾಗಿ ಪುನರಾಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಪ್ರತಿನಿಧಿ ಸಭೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಸಂಘಟನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.

SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್. ಅವರು ನಾಯಕತ್ವದ ಕುರಿತು ತರಬೇತಿ ನೀಡಿದರು. WIM ಕರ್ನಾಟಕ ರಾಜ್ಯ ಕಾರ್ಯದರ್ಶಿ ನಸ್ರಿಯ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಚುನಾವಣಾಧಿಕಾರಿಗಳಾದ ರಮ್ಲತ್ ಮಂಗಳೂರು ಹಾಗೂ ಝುಲೈಕ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿನೀರ ಬಾನು ಅವರನ್ನು ಮತ್ತೊಮ್ಮೆ WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು.

ನೂತನ ಜಿಲ್ಲಾ ಪದಾಧಿಕಾರಿಗಳು:

ಜಿಲ್ಲಾಧ್ಯಕ್ಷೆ: ಶಿನೀರ ಬಾನು

ಪ್ರಧಾನ ಕಾರ್ಯದರ್ಶಿ: ಝರೀನಾ ಉಪ್ಪಿನಂಗಡಿ

ಉಪಾಧ್ಯಕ್ಷೆ: ಝಹನ

ಕಾರ್ಯದರ್ಶಿ: ನುಸೈಬ ಕಲ್ಲಡ್ಕ

ಕೋಶಾಧಿಕಾರಿ: ನೌರಿನ ಅಲಂಪಾಡಿ

ಜಿಲ್ಲಾ ಸಮಿತಿ ಸದಸ್ಯೆಯರಾಗಿ ಶಮ ಉಜಿರೆ, ಝೈಬುನ್ನಿಸಾ ಬಿ.ಸಿ. ರೋಡ್, ಮರಿಯಮ್ಮ ಮೊಡಂತ್ಯಾರ್, ಗೌಸಿಯಾ ಪೊನ್ನೋಡಿ, ರುಬಿಯ ಬೆಳ್ತಂಗಡಿ, ಸನಾ ಸುಳ್ಯ, ಆಫ್ರಿನ್ ಬಂಟ್ವಾಳ ಹಾಗೂ ಮೆಹರು ಅಥೂರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಝಹನ ಅಕ್ಕರಂಗಡಿ ಸ್ವಾಗತಿಸಿದರು. ಮುರ್ಷಿದ ಹಾಗೂ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನಾ ಉಪ್ಪಿನಂಗಡಿ ವಂದಿಸಿದರು.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ

You cannot copy content of this page