September 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಬಡ್ಡಿ–ತ್ರೋಬಾಲ್‌ನಲ್ಲಿ ಹಯಾತುಲ್ ಇಸ್ಲಾಂ ಶಾಲೆಯ ಭರ್ಜರಿ ಸಾಧನೆ – ತಾಲೂಕು ಮಟ್ಟಕ್ಕೆ ತಂಡಗಳ ಆಯ್ಕೆ

ಗೂಡಿನಬಳಿ ಹಯಾತುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾ ಪ್ರತಿಭೆ ಮತ್ತೊಮ್ಮೆ ಗಮನ ಸೆಳೆದಿದ್ದು, ಶಾಲೆಯ ಕಬಡ್ಡಿ ಹಾಗೂ ತ್ರೋಬಾಲ್ ತಂಡಗಳು ವಲಯ ಮಟ್ಟದ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ.

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಸರಕಾರಿ ಪ್ರೌಢಶಾಲೆ, ಸುಜೀರು ಇವರ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಹಯಾತುಲ್ ಇಸ್ಲಾಂ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿತು.

ಅದೇ ರೀತಿ, ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14ರ ವಯೋಮಾನದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿಯೂ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿತು.

ತಂಡಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

You may also like

News

ಸೇವಾ ಕಾರ್ಯಗಳಿಗೆ ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಕೊಡುಗೆ ಶ್ಲಾಘನೀಯ – ಶಾಸಕ ವೇದವ್ಯಾಸ್ ಕಾಮತ್

ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ವಿತರಣೆ ಮಂಗಳೂರು: ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿರುವ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯ ಶ್ಲಾಘನೀಯವಾಗಿದ್ದು, ಇಂತಹ
News

ಜಿಲ್ಲಾಮಟ್ಟದ ಟೇಕ್ವಾಂಡೋದಲ್ಲಿ ರಿಯೋನ್ ಲಸ್ರಾದೊ ಚಿನ್ನದ ಸಾಧನೆ – ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆ

ವಿಟ್ಲದ ಪಿಎಂಶ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಕ್ವಾಂಡೋ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಿಯೋನ್ ಲಸ್ರಾದೊ 41 ಕೆ.ಜಿ.

You cannot copy content of this page