September 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ದ್ವಿತೀಯ ಸ್ಥಾನ

ಕಿರಣ್ ಬೇಡಿ ಅವರ ಕುರಿತು 5 ನಿಮಿಷಗಳ ಭಾಷಣ – ಪ್ರತಿಭೆಗೆ ರಾಜ್ಯಮಟ್ಟದಲ್ಲಿ ಮೆಚ್ಚುಗೆ

ಕರ್ನಾಟಕ ರಾಜ್ಯದ ಸಮಾಜ ವಿಜ್ಞಾನ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾರತದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಕುರಿತು ಕೇವಲ ಐದು ನಿಮಿಷಗಳಲ್ಲಿ ನಿರರ್ಗಳವಾಗಿ ಮಾತನಾಡಿ, ಬೈಂದೂರಿನ ಆಶಾ ವೀಣಾ ಡಯಾಸ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.

ರಾಜ್ಯಮಟ್ಟದಲ್ಲಿ ನಡೆದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ತಮ್ಮ ಸ್ಪಷ್ಟ ಮಾತುಗಾರಿಕೆ, ವಿಷಯ ಮಂಡನೆ ಹಾಗೂ ಆತ್ಮವಿಶ್ವಾಸದ ಮೂಲಕ ಗಮನ ಸೆಳೆದ ಆಶಾ ವೀಣಾ ಡಯಾಸ್ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಶೇಷವಾಗಿ, ಕಿರಣ್ ಬೇಡಿ ಅವರ ಜೀವನ, ಸೇವಾ ಮನೋಭಾವ, ಧೈರ್ಯ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆಗಳನ್ನು ಪರಿಣಾಮಕಾರಿಯಾಗಿ ಮಂಡಿಸುವ ಮೂಲಕ ಅವರು ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ಈ ಸಾಧನೆಯ ಮೂಲಕ ಆಶಾ ವೀಣಾ ಡಾಯಸ್ ಅವರು ತಮ್ಮ ಪ್ರತಿಭೆಯನ್ನು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ, ಯುವಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆಯಾಗಿದ್ದಾರೆ.

ಆಶಾ ವೀಣಾ ಡಯಾಸ್ ಅವರ ಈ ಸಾಧನೆ ಬೈಂದೂರಿಗೆ ಹೆಮ್ಮೆ ತಂದಿದ್ದು, ಅವರ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸಮಾಜ ಮತ್ತು ಆರೋಗ್ಯ ಹಾಗೂ ಶಿಕ್ಷಣ ಸಮಿತಿಯ ವತಿಯಿಂದ ಆಶಾ ವೀಣಾ ಡಾಯಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

You may also like

News

ವಿವಾಹ ವೇದಿಕೆಯಲ್ಲಿ ಸಮಾಜಮುಖಿ ಹೆಜ್ಜೆ – ‘ಗೋ ಸಮ್ಮಾನ್’ ಜಾಗೃತಿಗೆ ಬೆಂಬಲಿಸಿ ಅತಿಥಿಗಳ ಸಹಿ ಸಂಗ್ರಹ

ಬಂಟ್ವಾಳ: ವಿವಾಹ ಸಮಾರಂಭವೊಂದರಲ್ಲಿ ಕೇವಲ ಸಂಭ್ರಮಾಚರಣೆಗೆಷ್ಟೇ ಸೀಮಿತವಾಗದೆ, ಸಮಾಜಮುಖಿ ಹಾಗೂ ಗೋ ರಕ್ಷಣೆಯ ಜಾಗೃತಿ ಮೂಡಿಸುವ ವಿನೂತನ ಅಭಿಯಾನವೊಂದು ನಡೆಯುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದೆ. ಬಂಟ್ವಾಳ
News

ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ

ಕರ್ನಾಟಕದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಐತಿಹಾಸಿಕ ಗೌರವದತ್ತ ಹೆಜ್ಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಪುತ್ರಿ, ಮೈಸೂರಿನ ಪ್ರಧಾನ ಜಿಲ್ಲಾ ಮತ್ತು

You cannot copy content of this page