September 21, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೈವಾಹಿಕ ಕಲಹದ ಬೆನ್ನಲ್ಲೇ ಮಕ್ಕಳನ್ನು ಬಾವಿಗೆ ಎಸೆದ ಆರೋಪ – 3 ವರ್ಷದ ಮಗು ಸಾವು

ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ತನ್ನ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಇಂದು ಸೆಪ್ಟೆಂಬರ್ 19ರಂದು ಶನಿವಾರ ನಡೆದಿದೆ.

ಪೆರ್ನೆಯಲ್ಲಿ ವಾಸವಾಗಿರುವಪೆರ್ನೆ 32 ವರ್ಷ ಪ್ರಾಯದ ಸಿನಾನ್ ಹಾಗೂ 28 ವರ್ಷ ಪ್ರಾಯದ ನೂರುನ್ನಿಸಾ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಎರಡೂ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದರೆ ಈ ಪೈಕಿ ನೂರುನ್ನಿಸಾ ಅವರ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗು ಮೃತಪಟ್ಟಿದೆ. ನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ .ಕ್ರ. 121/2026ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿತೆ ನೂರುನ್ನಿಸಾರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

You may also like

News

Father Muller Welcomes 33rd Batches of Allied Health and Physiotherapy Students

A new generation of aspiring healthcare professionals began their academic journey at Father Muller as the 33rd batches of Father
News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ

You cannot copy content of this page