September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಕಾರು ಚಾಲಕ ಹಾಗೂ ಆಪ್ತ ಸಹಾಯಕ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿದ್ದ ಕೆಲವರಿಗೂ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

ಅಪಘಾತದ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಕಾರು ಹಾಗೂ ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅಪಘಾತಕ್ಕೆ ಕಾರಣವೇನು ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದುಬರಬೇಕಿದೆ.

You may also like

News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,
News

ಆರೋಗ್ಯದತ್ತ ಕಾಳಜಿಯ ಹೆಜ್ಜೆ – ಇಂದು ಸೆಪ್ಟೆಂಬರ್ 20ರಂದು ಉಚಿತ ವೈದ್ಯಕೀಯ ಶಿಬಿರ

ಕಿವಿ–ಮೂಗು–ಗಂಟಲು, ಕಣ್ಣು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ; ರಕ್ತದಾನಕ್ಕೂ ಅವಕಾಶ   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ಇಂಡಿಯನ್

You cannot copy content of this page