September 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

UAE ಯಲ್ಲಿ ಮಾರ್ಗದೀಪದ ಗಣೇಶೋತ್ಸವ ಸಂಭ್ರಮ: ಭಕ್ತಿ–ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾದ 12ನೇ ವರ್ಷದ ಆಚರಣೆ

ಕನ್ನಡ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಮೌಲ್ಯಗಳನ್ನು ವಿದೇಶದಲ್ಲೂ ಉಳಿಸಿ ಬೆಳೆಸುವ ಉದ್ದೇಶದಿಂದ ಮಾರ್ಗದೀಪ ಸಾಂಸ್ಕೃತಿಕ ಸಮಿತಿ UAE ವತಿಯಿಂದ ಆಯೋಜಿಸಲಾದ 12ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನೆರವೇರಿತು.

ವೇದಮೂರ್ತಿಗಳಾದ ಸಾಂತೂರು ಲಕ್ಷ್ಮೀಕಾಂತ್ ಭಟ್ ಹಾಗೂ ರಾಜೇಶ್ ಪ್ರಸಾದ್ ಅಡಿಗ ಅವರ ಪೌರೋಹಿತ್ಯದಲ್ಲಿ ಗಣಹೋಮ, ಶ್ರೀಗಣೇಶ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಯುಎಇಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಕರ್ನಾಟಕದ ಮಾಜಿ ಸಚಿವ ಹಾಗೂ ಉದ್ಯಮಿ ಕೃಷ್ಣ ಜೆ. ಪಾಲೇಮಾರ್, ಕರ್ನಾಟಕ ಸಂಘ ಅಬುಧಾಬಿಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಸಮಾಜಸೇವಕ ರವಿ ಕಟಪಾಡಿ ಹಾಗೂ ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಮಹೇಶ್ ಚಂದ್ರಗಿರಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರ್ವೋತ್ತಮ ಶೆಟ್ಟಿ ಹಾಗೂ ರವಿ ಕಟಪಾಡಿ ಅವರನ್ನು ಸಮಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಸಮಾಜಸೇವಕ ರವಿ ಕಟಪಾಡಿಗೆ ವಿಶೇಷ ಗೌರವ:

ಜನ್ಮಾಷ್ಟಮಿ ಸಂದರ್ಭದಲ್ಲಿ ಕಳೆದ 14 ವರ್ಷಗಳಿಂದ ವಿಭಿನ್ನ ವೇಷಧಾರಣೆಗಳ ಮೂಲಕ ಹಣ ಸಂಗ್ರಹಿಸಿ ಬಡ ಹಾಗೂ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರ ಸಮಾಜಸೇವೆಯನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಗುರುತಿಸಲಾಯಿತು. ಕಳೆದ ಹತ್ತು ವರ್ಷಗಳಲ್ಲಿ ಅವರ ತಂಡ ₹1.85 ಕೋಟಿ ಸಂಗ್ರಹಿಸಿ 204 ಮಕ್ಕಳ ಚಿಕಿತ್ಸೆಗೆ ನೆರವಾಗಿದೆ ಎಂದು ತಿಳಿಸಲಾಯಿತು.

ಉತ್ಸವದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನೆ, ರಂಗಸಾರಥಿ ಪ್ರತಿಷ್ಠಾನ, ಸ್ಮೈಲ್ ಕ್ರಿಯೇಷನ್ ದುಬೈ ಹಾಗೂ ಸಂಸ್ಕೃತಿ ನೃತ್ಯ ಶಾಲೆ ಸೇರಿದಂತೆ ವಿವಿಧ ತಂಡಗಳಿಂದ ನೃತ್ಯ ಮತ್ತು ಮನರಂಜನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಬಿ.ಕೆ., ಸಂತೋಷ್ ಶೆಟ್ಟಿ ಪೊಳಿಲ್ ಹಾಗೂ ರತ್ನಾಕರ ಶೇರಿಗಾರ್–ಪುಪ್ಪ ರತ್ನಾಕರ್ ಶೇರಿಗಾರ್ ದಂಪತಿ ಅವರನ್ನು ಸನ್ಮಾನಿಸಲಾಯಿತು. ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ ವಿಶೇಷ ಪೂಜೆಯ ಬಳಿಕ ಭಜನೆ, ವಾದ್ಯಘೋಷ ಹಾಗೂ ಶೋಭಾಯಾತ್ರೆಯೊಂದಿಗೆ ಶ್ರೀಗಣೇಶನ ವಿಸರ್ಜನಾ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿತು.

You may also like

News

Father Muller Celebrates World Pharmacist Day, Honouring the Dedicated Service of Pharmacists

Father Muller Medical College Hospital Celebrated World Pharmacist Day with enthusiasm and gratitude, recognising the dedicated services of pharmacists and
News

ತುಂಬೆಯಲ್ಲಿ ಅಕ್ರಮ ಮರಳುಗಾರಿಕೆ – ನಾಲ್ವರು ವಶಕ್ಕೆ, ₹25.24 ಲಕ್ಷ ಮೌಲ್ಯದ ವಾಹನ–ಸಾಮಗ್ರಿ ಜಪ್ತಿ

ಬಂಟ್ವಾಳ ಗ್ರಾಮಾಂತರ ಠಾಣೆ PSI ರನ್ನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆಯಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಲಾರಿಗಳಿಗೆ

You cannot copy content of this page