September 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಕ್ಸೋ ಪ್ರಕರಣ – ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು

ಪ್ರತಿಷ್ಠಿತ ವಕೀಲರಾದ ಮಹೇಶ್ ಕಜೆ ಅವರ ವಾದ – ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ Crime No. 46/2026ರ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ @ ಅದ್ರಮ್ ಅವರಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿವರಗಳ ಪ್ರಕಾರ, ಆರೋಪಿಯು ಸಂತ್ರಸ್ತ ಬಾಲಕಿಯ ಮನೆಯ ಸಮೀಪದವರಾಗಿದ್ದು, ತಮ್ಮ ಮಕ್ಕಳೊಂದಿಗೆ ಸಂತ್ರಸ್ತೆಯನ್ನೂ ಪ್ರತಿದಿನ ಶಾಲೆಗೆ ಕರೆದೊಯ್ದು, ಮರಳಿ ಮನೆಗೆ ಕರೆತರುತ್ತಿದ್ದರು ಎನ್ನಲಾಗಿದೆ.

ದಿನಾಂಕ 23-08-2026ರಂದು ಬಪ್ಪಳಿಗೆಯ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರೋಪಿಯು ತನ್ನ ಮಗಳು ಹಾಗೂ ಸಂತ್ರಸ್ತ ಬಾಲಕಿಯನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದ್ದು, ಕಾರ್ಯಕ್ರಮ ಮುಗಿಸಿ ರಾತ್ರಿ ಸುಮಾರು 11 ಗಂಟೆ ವೇಳೆಗೆ ಹಿಂದಿರುಗುವ ಸಂದರ್ಭದಲ್ಲಿ ಸಂತ್ರಸ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಇನ್ನು ಮುಂದೆ ಶಾಲೆಗೆ ಕರೆದೊಯ್ಯುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬ ಆರೋಪವನ್ನು ಸಂತ್ರಸ್ತೆಯ ತಾಯಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ತಾಯಿ 24-08-2026ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಬಂಧನದ ಭೀತಿಯ ಹಿನ್ನೆಲೆಯಲ್ಲಿ ಆರೋಪಿ ಅದ್ದು ಪಡೀಲ್ ಅವರು ಕಜೆ ಲಾ ಚೇಂಬರ್ಸ್‌ನ ಹಿರಿಯ ವಕೀಲರಾದ ಮಹೇಶ್ ಕಜೆ ಅವರ ಮೂಲಕ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಎರಡೂ ಕಡೆಯ ವಾದ-ವಿವಾದಗಳನ್ನು ಆಲಿಸಿದ ಬಳಿಕ 25-09-2026ರಂದು ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಂತೆ ಜಾಮೀನಿನ ಷರತ್ತುಗಳು ಅನ್ವಯವಾಗಲಿದ್ದು, ಪ್ರಕರಣದ ಮುಂದಿನ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ.

You may also like

News

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟಕ್ಕೆ ಚಾಲನೆ – 123 ಭಜನಾ ಮಂಡಳಿಗಳ 204 ಶಿಬಿರಾರ್ಥಿಗಳು ಭಾಗಿ

ಭಜನೆಯಿಂದ ಜೀವನ ಪಾವನ ಹಾಗೂ ಮನಸ್ಸಿಗೆ ಶಾಂತಿ – ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಉಜಿರೆ: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ಪರಿಶುದ್ಧ ಮನಸ್ಸು, ದೇಹ
News

ಮಾಣಿ ಫ್ಲೈಓವರ್ ಬಳಿ ಭೀಕರ ಅಪಘಾತ – ಮಹಿಳೆ ಮೃತ್ಯು, ಮೂವರು ಗಂಭೀರ

ಬಂಟ್ವಾಳ: ಮಾಣಿ ಫ್ಲೈಓವರ್ ಆರಂಭವಾಗುವ ರಸ್ತೆಯ ಬಳಿ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಡಿಕೇರಿ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದು,

You cannot copy content of this page