October 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಲಯ ಮಟ್ಟದ ವಿಜ್ಞಾನ ಪ್ರಬಂಧ ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಪುತ್ತೂರಿನ ಅಂಬಿಕಾ ಕಾಲೇಜಿನ ಮಂದಿರಾ ಕಜೆ – ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪುತ್ತೂರಿನ ಪ್ರಸಿದ್ಧ ವಕೀಲರಾದ ಮಹೇಶ್ ಕಜೆ ಹಾಗೂ ದೀಪಿಕಾ ಭಟ್ ಕಜೆ ದಂಪತಿಯ ಪುತ್ರಿ

ಪುತ್ತೂರು: ಆಂಧ್ರಪ್ರದೇಶದ ವಿಜಯವಾಡ ಸಮೀಪದ ನುಟ್ಟಕ್ಕಿಯಲ್ಲಿರುವ ವಿಜ್ಞಾನ ವಿಹಾರ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿ ಸ್ಪರ್ಧೆಯಲ್ಲಿ ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಬಹುಮಾನ ಪಡೆದು ಕರಾವಳಿ ಹಾಗೂ ರಾಜ್ಯಕ್ಕೆ ಮತ್ತು ಕಜೆ ಕುಟುಂಬಕ್ಕೆ ಕೀರ್ತಿ ತಂದಿದ್ದಾರೆ.

ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ತೀವ್ರ ಪೈಪೋಟಿಯ ಸ್ಪರ್ಧೆಯಲ್ಲಿ, ಮಂದಿರಾ ಕಜೆ ಅವರು ವಿಷಯದ ಮೇಲಿದ್ದ ಆಳವಾದ ಜ್ಞಾನ, ಸ್ಪಷ್ಟವಾದ ವೈಜ್ಞಾನಿಕ ವಿಚಾರ ಮಂಡನೆ ಹಾಗೂ ಆತ್ಮವಿಶ್ವಾಸದ ಪ್ರಸ್ತುತಿಯ ಮೂಲಕ ಐದೂ ಜನ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿ ಪ್ರಥಮ ಸ್ಥಾನ ಗಳಿಸಿದರು.

ವಿಜೇತರಾದ ಮಂದಿರಾ ಕಜೆ ಅವರು ಪುತ್ತೂರಿನ ಪ್ರಸಿದ್ಧ ವಕೀಲರಾದ ಮಹೇಶ್ ಕಜೆ ಹಾಗೂ ದೀಪಿಕಾ ಭಟ್ ಕಜೆ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ (ವಾಣಿಜ್ಯ ವಿಭಾಗ) ವ್ಯಾಸಂಗ ಮಾಡುತ್ತಿದ್ದಾರೆ.

ವಲಯ ಮಟ್ಟದಲ್ಲಿ ಸಾಧಿಸಿದ ಈ ಅದ್ಭುತ ಯಶಸ್ಸಿನೊಂದಿಗೆ ಮಂದಿರಾ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.

You may also like

News

Ryshivana Hosts Week-Long Symposium on Administration and Leadership

Ryshivana hosted a week-long Symposium on Administration aimed at equipping religious and institutional leaders with practical insights into responsible administration,
News

ಬೆಳ್ತಂಗಡಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರದೊಂದಿಗೆ ಸ್ಪಂದನೆ – ಶಾಸಕ ಹರೀಶ್ ಪೂಂಜ ಬೆಳ್ತಂಗಡಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಕ್ರಿಶ್ಚಿಯನ್ ಸಮುದಾಯಕ್ಕೆ ಲಭ್ಯವಿರುವ ವಿವಿಧ

You cannot copy content of this page