October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಧ್ವನಿ, ಸಂಭಾಷಣೆ, ಅಭಿನಯ’ದ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದ ನಾನಾ ಪಾಟೇಕರ್ ಇನ್ನಿಲ್ಲ

75ನೇ ವಯಸ್ಸಿನಲ್ಲಿ ಗೋವಾದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಬಲಿ

ಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟ 75 ವರ್ಷ ಪ್ರಾಯದ ನಾನಾ ಪಾಟೇಕರ್ ಅವರು ಇಂದು ಅಕ್ಟೋಬರ್ 8ರಂದು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾದರು. ಬೆಳಗ್ಗೆ ಸುಮಾರು 5.20ರ ವೇಳೆಗೆ ಅವರಿಗೆ ತೀವ್ರ ಹೃದಯ ಸ್ತಂಭನ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಸೇರಿದಂತೆ ತುರ್ತು ಚಿಕಿತ್ಸಾ ಪ್ರಯತ್ನ ನಡೆಸಿದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ವರದಿಗಳು ತಿಳಿಸಿವೆ.

ನಾನಾ ಪಾಟೇಕರ್ ಅವರು ತಮ್ಮ ತೀವ್ರ ಹಾಗೂ ಸಹಜ ಅಭಿನಯ, ವಿಶಿಷ್ಟ ಧ್ವನಿ ಮತ್ತು ವಿಭಿನ್ನ ಸಂಭಾಷಣಾ ಶೈಲಿಯಿಂದ ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ವಿಭಿನ್ನ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಅತ್ಯುತ್ತಮ ಅಭಿನಯಕ್ಕಾಗಿ ನಾನಾ ಪಾಟೇಕರ್ ಅವರು ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

You may also like

News

Father Muller Thumbay Campus welcomes Nursing & Allied Health Students

The Course Inauguration Ceremony of the 5th batch of B.Sc. Nursing of Father Muller Nursing College Thumbay (FMNCT) and the
News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,

You cannot copy content of this page