October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ನವರಾತ್ರಿ ವೈಭವ – ಅಕ್ಟೋಬರ್ 11ರಿಂದ 19ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಸಂಭ್ರಮ

ನವರಾತ್ರಿ ಉತ್ಸವದ ಅಂಗವಾಗಿ ಧರ್ಮಸ್ಥಳದಲ್ಲಿ ಅಕ್ಟೋಬರ್ 11ರಿಂದ 19ರವರೆಗೆ ವೈವಿಧ್ಯಮಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಪ್ರತಿದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಲಿದೆ. ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ರಾತ್ರಿ 9ರವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಂಗೀತ, ನೃತ್ಯ ಹಾಗೂ ಭಕ್ತಿಗೀತೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ.

ಅಕ್ಟೋಬರ್ 11, ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಹಾಗೂ ಕುಮಾರಿ ಆದ್ವಿ, ನಿಡಿಗಲ್ ಅವರಿಂದ ಭಕ್ತಿಸಂಗೀತ.

ಅಕ್ಟೋಬರ್ 12, ಸೋಮವಾರ: ಪವಿತ್ರ ವಿನಯ್ ಮಯ್ಯ ಅರ್ಕುಳ, ಮಂಗಳೂರು ಅವರಿಂದ ಸುಗಮ ಸಂಗೀತ.

ಅಕ್ಟೋಬರ್ 13, ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು ಅವರಿಂದ ಭಕ್ತಿಸಂಗೀತ.

ಅಕ್ಟೋಬರ್ 14, ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ.

ಅಕ್ಟೋಬರ್ 15, ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಹಾಗೂ ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು ಅವರಿಂದ ನೃತ್ಯ ಹಾಗೂ ಗಾನಲಹರಿ.

ಅಕ್ಟೋಬರ್ 16, ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು ಅವರಿಂದ ವಯಲಿನ್ ವಾದನ.

ಅಕ್ಟೋಬರ್ 17, ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ.

ಅಕ್ಟೋಬರ್ 18, ಭಾನುವಾರ: ಕುಮಾರಿ ಐಶ್ವರ್ಯ ಜೋಗಿ ಹಾಗೂ ತಂಡ, ಕುಂದಾಪುರ ಅವರಿಂದ ಸುಮಧುರ ಗಾನವೈಭವ.

ಅಕ್ಟೋಬರ್ 19, ಸೋಮವಾರ: ಸಂಜೆ 6.30ರಿಂದ ರಾತ್ರಿ 8.30ರವರೆಗೆ ಕುಮಾರಿ ಅರ್ಚಿಷಾ ರಾವ್ ಹಾಗೂ ಬಳಗ, ಬೆಂಗಳೂರು ಅವರ ಕಾರ್ಯಕ್ರಮ ನಡೆಯಲಿದೆ. ಬಳಿಕ ರಾತ್ರಿ 9ರಿಂದ 11.30ರವರೆಗೆ ಮಲ್ಲಿಕಾಮಟ್ಟಿ ಹಾಗೂ ಬಳಗ, ಪೊಳಲಿ ಅವರಿಂದ ಭಕ್ತಿಸಂಗೀತ ಕಾರ್ಯಕ್ರಮ ನಡೆಯಲಿದೆ.

ನವರಾತ್ರಿಯ ಧಾರ್ಮಿಕ ಭಕ್ತಿಭಾವದೊಂದಿಗೆ ಸಂಗೀತ, ನೃತ್ಯ ಹಾಗೂ ಸಾಂಸ್ಕೃತಿಕ ವೈಭವವನ್ನು ಒಟ್ಟಿಗೆ ಆಸ್ವಾದಿಸುವ ಅವಕಾಶವನ್ನು ಭಕ್ತರು ಹಾಗೂ ಕಲಾಸಕ್ತರು ಸದುಪಯೋಗಪಡಿಸಿಕೊಳ್ಳುವಂತೆ ಧರ್ಮಸ್ಥಳದ ಆಡಳಿತ ಮಂಡಳಿ ಮನವಿ ಮಾಡಿದೆ.

You may also like

News

Father Muller Thumbay Campus welcomes Nursing & Allied Health Students

The Course Inauguration Ceremony of the 5th batch of B.Sc. Nursing of Father Muller Nursing College Thumbay (FMNCT) and the
News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,

You cannot copy content of this page