October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಯುವ ಸಂಸತ್ತಿನಲ್ಲಿ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಅಣಕು ಸಂಸತ್ (Mock Parliament) ಕಲಾಪ ನಡೆಸಿದರು. ಸಂಸದೀಯ ಕಲಾಪದ ಮಾದರಿಯಲ್ಲಿ ಪ್ರಶ್ನೋತ್ತರ, ಚರ್ಚೆ ಹಾಗೂ ವಿಚಾರ ಮಂಡನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಮತ್ತು ಪ್ರಚಲಿತ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಸದೀಯ ಪ್ರಕ್ರಿಯೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ವಿಚಾರಗಳ ಕುರಿತು ಚರ್ಚಿಸುವ ಅವಕಾಶ ಕಲ್ಪಿಸಿತು. ರಮೇಶ್, ಚೇತನಾಕ್ಷಿ ಹಾಗೂ ಮುರಳೀಧರ್ ಅವರು ತೀರ್ಪುಗಾರರಾಗಿ ಸಹಕರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಬಿ., ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ, ಉಪನ್ಯಾಸಕರಾದ ನಟರಾಜ್, ಕೀರ್ತಿರಾಜ್, ಸಂತೋಷ್ ಹಾಗೂ ಶಿಕ್ಷಕರಾದ ಕಿರಣ್, ಇಸಾಕ್, ಶೈಲೇಶ್ ಮತ್ತು ಜಯರಾಮ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page