October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ

ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಡ್ಯದಲ್ಲಿ ಸಾರ್ವಜನಿಕರು, ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ತಿಮ್ಮಯ್ಯ ಅವರು ಈ ಹಿಂದೆ ಉಡುಪಿ, ಮಣಿಪಾಲ ಹಾಗೂ ಕೋಟ ಪೊಲೀಸ್ ಠಾಣೆಗಳಲ್ಲಿ PI ಹಾಗೂ PSI ಆಗಿ ಕರ್ತವ್ಯ ನಿರ್ವಹಿಸಿದ್ದರು. ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು
News

Father Muller Thumbay Campus welcomes Nursing & Allied Health Students

The Course Inauguration Ceremony of the 5th batch of B.Sc. Nursing of Father Muller Nursing College Thumbay (FMNCT) and the

You cannot copy content of this page