ಸಾಹಿತಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ಗೌರವ
ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದ ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದ ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ (ಐಎಎಸ್) ಅವರು ನವೀದ್ ಮುಲ್ಲಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಸರ್ಕಾರದ ಜಾನಪದ ಅಕಾಡೆಮಿಯ ಪ್ರಥಮ ಅಧ್ಯಕ್ಷರು ಹಾಗೂ ಸಮ್ಮೇಳನದ ಅಧ್ಯಕ್ಷರಾದ ಪೊಟ್ಲೂರಿ ಹರಿಕೃಷ್ಣ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಲೇಖಕರು, ಸಾಹಿತಿಗಳು, ಕಲಾವಿದರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ದೊರೆತಿರುವುದು ಅವರ ಸಾಹಿತ್ಯ ಸೇವೆಗೆ ಸಂದ ಗೌರವವಾಗಿದೆ.



