October 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ.

ಆರೋಪಿಗಳು ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ದೂರುದಾರರ ಮೇಲೆ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿದ್ದಾರೆ ಎನ್ನಲಾಗಿದೆ. ಬಳಿಕ WhatsApp ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪದಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

ಆರೋಪಿಗಳ ಮಾತನ್ನು ನಂಬಿದ ದೂರುದಾರರು 2026ರ ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ.

ಈ ಕುರಿತು CCPS DK ಅ.ಕ್ರ. 42/2026ರಂತೆ ಐಟಿ ಕಾಯ್ದೆಯ ಸೆಕ್ಷನ್ 66(C), 66(D) ಹಾಗೂ BNSನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.

You may also like

News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್
News

ಹಂಟರ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಸಕ್ಸಸ್ ಕುಕ್ಕರಬೆಟ್ಟಿಗೆ ಚಾಂಪಿಯನ್ ಪಟ್ಟ

ಇಂಡಿಯನ್ ಪಾಟ್ರಕೋಡಿ ತಂಡಕ್ಕೆ ದ್ವಿತೀಯ ಸ್ಥಾನ – ಹಲವು ಆಟಗಾರರಿಗೆ ವೈಯಕ್ತಿಕ ಪ್ರಶಸ್ತಿ ಬಂಟ್ವಾಳ: ಹರ್ಬನ್ ಹಂಟರ್ಸ್ ಸ್ಪೋರ್ಟ್ಸ್ ಕ್ಲಬ್, ನೆಟ್ಲಮುಡ್ನೂರು ಇದರ ಆಶ್ರಯದಲ್ಲಿ ಕುಕ್ಕರಬೆಟ್ಟು ಸಕ್ಸಸ್

You cannot copy content of this page