October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಿರಿಯ ಆಟೋ ಚಾಲಕ, ಕಬಡ್ಡಿ ಪಟು ಶುಕುರು ಸಾಹೇಬ್ ನಿಧನ

ಬಂಟ್ವಾಳ: ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ, ಹಿರಿಯ ಆಟೋ ಚಾಲಕ ಹಾಗೂ ಉತ್ತಮ ಕಬಡ್ಡಿ ಪಟುವಾಗಿದ್ದ 58 ವರ್ಷ ಪ್ರಾಯದ ಶುಕುರು ಸಾಹೇಬ್ ಅವರು ಹೃದಯಾಘಾತದಿಂದ ಇಂದು ಅಕ್ಟೋಬರ್ 14ರಂದು ಬುಧವಾರ ಬೆಳಗ್ಗೆ ನಿಧನರಾದರು.

ಹಲವು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದ ಶುಕುರು ಸಾಹೇಬ್ ಅವರು ತಮ್ಮ ಸರಳ ಸ್ವಭಾವ ಹಾಗೂ ಆತ್ಮೀಯ ಒಡನಾಟದಿಂದ ಪರಿಸರದ ಸರ್ವಧರ್ಮೀಯರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಶಾಲಾ ದಿನಗಳಿಂದಲೇ ಕಬಡ್ಡಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಅವರು, ಬಳಿಕವೂ ಉತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. ಕ್ರೀಡಾ ಕ್ಷೇತ್ರದಲ್ಲಿನ ತಮ್ಮ ಸಾಧನೆಯ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಅಗಲಿದ್ದಾರೆ.

You may also like

News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ
News

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ್ – ಡಾ. ಸುಧಾ ಯಾದವ್‌ ಅವರಿಗೆ ಕರ್ನಾಟಕದ ಹೊಣೆ

ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ

You cannot copy content of this page