October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ

ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ನೂತನ ಕಟ್ಟಡವು ಗ್ರಾಮಸ್ಥರಿಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು, ಸರ್ಕಾರಿ ಕಟ್ಟಡಗಳ ಗಾತ್ರಕ್ಕಿಂತ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸುವುದು ಹೆಚ್ಚು ಮುಖ್ಯ. ಜನಸ್ಪಂದನೆಯೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಮೂಲ ಉದ್ದೇಶವಾಗಿದ್ದು, ಜನರಿಗೆ ಪರಿಣಾಮಕಾರಿ ಸೇವೆ ಒದಗಿಸುವ ಮೂಲಕ ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನೂತನ ಕಟ್ಟಡದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಮುಂದಿನ ಗ್ರಾಮ ಪಂಚಾಯತ್ ಚುನಾವಣೆಗೆ ಮುನ್ನವೇ ಉದ್ಘಾಟನೆ ನೆರವೇರಿಸುವಂತಾಗಲಿ ಎಂದು ಅವರು ಆಶಿಸಿದರು.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ
News

ಹಿರಿಯ ಆಟೋ ಚಾಲಕ, ಕಬಡ್ಡಿ ಪಟು ಶುಕುರು ಸಾಹೇಬ್ ನಿಧನ

ಬಂಟ್ವಾಳ: ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ, ಹಿರಿಯ ಆಟೋ ಚಾಲಕ ಹಾಗೂ ಉತ್ತಮ ಕಬಡ್ಡಿ ಪಟುವಾಗಿದ್ದ 58 ವರ್ಷ ಪ್ರಾಯದ ಶುಕುರು ಸಾಹೇಬ್ ಅವರು ಹೃದಯಾಘಾತದಿಂದ ಇಂದು

You cannot copy content of this page