ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ
ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 110/2019ರ ಐಪಿಸಿ ಕಲಂ 457 ಮತ್ತು 380ರ ಪ್ರಕರಣದಲ್ಲಿ ಆರೋಪಿಯಾಗಿದ್ದ ರಂಶೀದ್ನನ್ನು ಅಕ್ಟೋಬರ್ 13ರಂದು ನೀಲಂಬೂರು ವಂಡೂರು ಪ್ರದೇಶದಲ್ಲಿ ವಿಟ್ಲ ಪೊಲೀಸ್ ಠಾಣೆಯ ASI ಜಯರಾಮ ಮತ್ತು CPC 2462 ಶಿವಾನಂದ ಅವರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.



