October 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ್ಪಿನಂಗಡಿಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ – ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆಯಾದ ವೇಳೆ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಉಂಟುಮಾಡಿದ ಆರೋಪದಡಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 18ರಂದು ಭಾನುವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿತ್ತು. ಈ ಸಂದರ್ಭದಲ್ಲಿ ಮಂಜುನಾಥ್ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಮತ್ತು ವಿಶ್ವನಾಥ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಕುಡಿದ ಮತ್ತಿನಲ್ಲಿದ್ದ ಮುನ್ನ ಎಂಬಾತ ಮಂಜುನಾಥ್‌ನ ಮನೆಯವರನ್ನು ಅವಾಚ್ಯವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 135/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) 2023ರ ಕಲಂ 194, 296 ಮತ್ತು 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1B)(b)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಶಕ್ಕೆ ಪಡೆದಿರುವ ಇಬ್ಬರನ್ನು ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಬಂಟ್ವಾಳದಲ್ಲಿ ಸಾಲದ ಹಣದ ವಿವಾದ: ಅಣ್ಣನಿಗೆ ಚಾಕು ಇರಿತ, ತಮ್ಮನ ಮೇಲೆ ಹಲ್ಲೆಗೆ ಯತ್ನ – ಆರೋಪಿ ಅಜಿತ್ ಪೊಲೀಸ್ ವಶಕ್ಕೆ

ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನಿಗೆ ಚಾಕುವಿನಿಂದ ಇರಿದು, ತಮ್ಮನ ಮೇಲೂ ಹಲ್ಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ
News

ಮಹಿಳಾ ಸಬಲೀಕರಣಕ್ಕೆ ಮುಲ್ಕಿಯಲ್ಲಿ ‘ಮಹಿಳೋತ್ಸವ 2026’ ಚಾಲನೆ – ಒಂಟಿ ತಾಯಂದಿರ ನೆರವಿಗೆ ₹1 ಕೋಟಿ ನಿಧಿ

ಚರ್ಚ್ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರು ಪ್ರಮುಖ ಪಾಲುದಾರರು – ಕಾರ್ಡಿನಲ್ ಫಿಲಿಪ್ ನೇರಿ ಫೆರಾವೊ ಮಹಿಳಾ ಘನತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸುವ ಆಶಯದೊಂದಿಗೆ

You cannot copy content of this page