October 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೇಣೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ – ಹಣದ ಆಮಿಷವೊಡ್ಡಿದ 61ರ ಹರೆಯದ ವ್ಯಕ್ತಿ ಪೊಲೀಸ್ ವಶಕ್ಕೆ

ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಸಾರ್ವಜನಿಕ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ 61 ವರ್ಷ ಪ್ರಾಯದ ಸೈಯ್ಯದ್ ಮಹಮ್ಮದ್ ಇಸಾಕ್ ಎಂಬಾತನ ವಿರುದ್ಧ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಪ್ರಕಟಣೆಯ ಪ್ರಕಾರ, ಅಕ್ಟೋಬರ್ 24ರಂದು ಶನಿವಾರ  ಮಧ್ಯಾಹ್ನ ಯುವತಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಆರೋಪಿ, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ ಹಣದ ಆಮಿಷವೊಡ್ಡುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 75(1)(ii), 75(1)(iv) ಮತ್ತು 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

You may also like

News

ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿಗೆ ವ್ಯಕ್ತಿ ಬಲಿ

ತಂದೆ ನ್ಯಾಯಾಧೀಶರ ವಿರುದ್ಧವೂ ಪ್ರಕರಣ ದಾಖಲಿಸಲು ಹೈಕೋರ್ಟ್ ಅನುಮತಿ! ಕೇರಳದ ಕೊಚ್ಚಿಯಲ್ಲಿ ನ್ಯಾಯಾಧೀಶರೊಬ್ಬರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಸ್ಕೂಟರ್‌ಗೆ ಡಿಕ್ಕಿ
News

ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ – ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೊಸ ಕೊಡುಗೆಗಳ ಘೋಷಣೆ

ಉಜಿರೆಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ ಕಾಲೇಜು ಹಾಗೂ ₹11 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕ್ಯಾಥ್ ಲ್ಯಾಬ್ – ಶ್ರವಣಬೆಳಗೊಳದಲ್ಲಿ ವಿದ್ಯಾರ್ಥಿನಿ ನಿಲಯ   ಅನ್ನದಾನ, ವಿದ್ಯಾದಾನ, ಅಭಯದಾನ ಹಾಗೂ

You cannot copy content of this page