November 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಸುದರ್ಶನ್ ಜೈನ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಅನುಭವಿ ಸಹಕಾರಿ ಕ್ಷೇತ್ರದ ಮುಖಂಡ ಸುದರ್ಶನ್ ಜೈನ್ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆ ಮೇರೆಗೆ ಈ ನೇಮಕಾತಿ ನಡೆದಿದ್ದು, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ಎಸ್. ತಾಳಂಪಳ್ಳಿ ಅವರು ಇಂದು ನವಂಬರ್ 19ರಂದು ಗುರುವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಸುದರ್ಶನ್ ಜೈನ್ ಅವರು ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಆರು ವರ್ಷಗಳ ಕಾಲ ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಸುದೀರ್ಘ ಸಹಕಾರಿ ಕ್ಷೇತ್ರದ ಅನುಭವ ಹಾಗೂ ಸ್ಥಳೀಯ ಆಡಳಿತದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.

You may also like

News

ಕಸ್ತೂರಿ ರಂಗನ್ ವರದಿ ಪರಿಶೀಲನಾ ಹೈಪವರ್ ಸಮಿತಿಗೆ ಮಂಗಳೂರಿನ ಉದ್ಯಮಿ ನಾಸಿರ್ ಲಕ್ಕಿಸ್ಟಾರ್ ನೇಮಕ

ಮಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಪರಿಶೀಲಿಸಿ, ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಬದಲಾವಣೆ ಹಾಗೂ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ಮಹತ್ವದ
News

ಅಪಘಾತ ತಡೆಗೆ ತಕ್ಷಣ ಕ್ರಮ ಕೈಗೊಳ್ಳಿ; ಹೆದ್ದಾರಿಗಳಲ್ಲಿ ಸುರಕ್ಷತಾ ವ್ಯವಸ್ಥೆ ಬಲಪಡಿಸಿ – SP ಡಾ. ಅರುಣ್ ಕುಮಾರ್

ಮಂಗಳೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಪದೇಪದೇ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಅಗತ್ಯ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

You cannot copy content of this page