July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಲೋಕಸೇವಾ ಆಯೋಗ-ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ಕಾನೂನು ಸಲಹೆಗಾರರನ್ನು ನೇಮಕಾತಿ ಮಾಡಿಕೊಳ್ಳಲು ಲೋಕಸೇವಾ ಆಯೋಗವು 5-09-2024ರಂದು ಅಧಿಸೂಚನೆಯನ್ನು ಹೊರಡಿಸಿದೆ.

ಹುದ್ದೆಯ ಹೆಸರು: ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ಕಾನೂನು ಸಲಹೆಗಾರರು

ವೇತನವು ಪ್ರತಿ ತಿಂಗಳು 1.15 ಲಕ್ಷ ರೂಪಾಯಿಗಳು. ಇದರ ಜೊತೆಗೆ ವಾಹನ ಭತ್ಯೆಯಾಗಿ ಪ್ರತಿ ತಿಂಗಳಿಗೆ ರೂಪಾಯಿ 35 ಸಾವಿರ ನಿಗದಿಪಡಿಸಲಾಗಿದೆ. ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ ಸೇವಾ ವಿಷಯದಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವ ಇರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಹುದ್ದೆಯು ಎರಡು ವರ್ಷಗಳ ಕಾಲಾವಧಿಯದ್ದಾಗಿದ್ದು, ಒಂದು ವರ್ಷದ ಕಾರ್ಯನಿರ್ವಣೆಯ ಆಧಾರದ ಮೇಲೆ ನಂತರದ ಒಂದು ವರ್ಷದ ವರೆಗೆ ಮುಂದುವರಿಸಲಾಗುವುದು. 1958ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಲ್ಲಿ ತಿಳಿಸಿದಂತೆ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುವ ನಿವೃತ್ತ ಸರ್ಕಾರಿ ನೌಕರರಿಗೆ ಲಭ್ಯವಾಗುವ ರಜಾ ಸೌಲಭ್ಯಗಳನ್ನು ಈ ಹುದ್ದೆಗೂ ಅನ್ವಯ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-09-2024 ಆಗಿರುತ್ತದೆ. ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಕಾರ್ಯದರ್ಶಿ, ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು– 560001 ಈ ವಿಳಾಸಕ್ಕೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಆಯೋಗದ ಆದೇಶದ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯವರು ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ.

 

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page