July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂಚಾರ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ಡಿಎಲ್‌ ಅಮಾನತು…!!

ಮಂಗಳೂರು: ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮೊದಲು ವಾಹನ ಚಾಲಕರು ಸಾಕಷ್ಟು ಚಿಂತಿಸಬೇಕಾಗಿದೆ. ಸಿಕ್ಕಿಬಿದ್ದರೆ ದಂಡ ಪಾವತಿಸಿ ಸುಮ್ಮನಾಗಬಹುದು ಎಂದು ಭಾವಿಸಿದ್ದರೆ ಆಪಾಯ ಖಚಿತ. ಯಾಕೆಂದರೆ ಪೊಲೀಸರು ಇಂಥವರ ಚಾಲನಾ ಪರವಾನಿಗೆಯನ್ನು ಅಮಾನತು ಮಾಡುವ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ‘ಡಿಎಲ್‌ ಅಮಾನತು’ ಅಸ್ತ್ರವನ್ನು ಹೆಚ್ಚಾಗಿ ಪ್ರಯೋಗಿಸಲು ಮುಂದಾಗಿದ್ದಾರೆ.  ದಕ್ಷಿಣ ಕನ್ನಡ ಮಾತ್ರವಲ್ಲದೆ ಉಡುಪಿ ಜಿಲ್ಲೆಯ ಪೊಲೀಸರು ಕೂಡ ಡಿಎಲ್‌ ಅಮಾನತಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಒಂದು ವರ್ಷದಲ್ಲಿ ಸಾವಿರಕ್ಕೂ ಅಧಿಕ ಡಿಎಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಯಾವುದೇ ರೀತಿಯ ವಾಹನ ಸಂಚಾರ ನಿಯಮ ಉಲ್ಲಂಘನೆಯಾದರೂ ಡಿಎಲ್‌ ಅಮಾನತಿಗೆ ಪೊಲೀಸರು ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಶಿಫಾರಸು ಮಾಡಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌, ಮಂಗಳೂರು ಪೊಲೀಸ್‌ ಕಮಿಷನರೆಟ್‌ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮದ್ಯ ಸೇವಿಸಿ ವಾಹನ ಚಾಲನೆ, ಅಪಘಾತದಿಂದ ಸಾವು ಸಂಭವಿಸುವಂಥ ಗಂಭೀರ ಪ್ರಕರಣಗಳು, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ, ಏಕಮುಖೀ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸುವುದು ಮುಂತಾದ ಪ್ರಕರಣಗಳಲ್ಲಿ ಡಿಎಲ್‌ ಅಮಾನತು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page