August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಬಾಲವಿಕಾಸ ಶಾಲೆಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

 

ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಧಾರ್ಮಿಕ ಪಠಣ ಸಂಸ್ಕೃತ ಮತ್ತು ಭಾವಗೀತೆ – ಸ್ವಸ್ತಿ (10ನೇ), ಕನ್ನಡ ಭಾಷಣ – ನಿವ್ಯಾ ರೈ (10ನೇ), ಇಂಗ್ಲಿಷ್ ಮತ್ತು ಹಿಂದಿ ಭಾಷಣ – ಪೂರ್ವಿ ಎ. ಭಾರಧ್ವಜ್ (9ನೇ), ಕವನ ವಾಚನ – ದೇವಿಕಾ ಕೆ(9ನೇ), ಘಜಲ್ – ವೈಷ್ಣವಿ (10ನೇ), ರಸಪ್ರಶ್ನೆ – ಆರನ್ ಪೈಸ್ (10ನೇ) ಮತ್ತು ಪುನೀತ್ ಕೆ.ಜಿ. (10ನೇ), ಆಶು ಭಾಷಣ ಮತ್ತು ಚರ್ಚಾ ಸ್ಪರ್ಧೆ‌- ಪ್ರಗತಿ(9ನೇ) ಹಾಗೂ ಕವ್ವಾಲಿ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ. ಭರತನಾಟ್ಯದಲ್ಲಿ ಸಂಜನಾ ಎಸ್. ಭಟ್ (9ನೇ) ಹಾಗೂ ಜಾನಪದ ನೃತ್ಯ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳೆಲ್ಲರೂ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿ ಶುಭಶಯಗಳನ್ನು ಸಲ್ಲಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page