August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ‘ಪಾಕಿಸ್ತಾನ’ ಹೇಳಿಕೆ – ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೊತ್ತಿಕೊಂಡ ಸುಪ್ರೀಂಕೋರ್ಟ್

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಹೇಳಿದ ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡ ವೀಡಿಯೊ ಕ್ಲಿಪ್ ಗಳನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಇಂದು ಈ ಕುರಿತು ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ. ವಿಚಾರಣೆಯೊಂದರ ಸಂದರ್ಭದಲ್ಲಿ, “ಮೈಸೂರು ರಸ್ತೆ ಮೇಲು ಸೇತುವೆಗೆ ಹೋಗಿ ನೋಡಿ, ಪ್ರತಿ ಅಟೋ ರಿಕ್ಷಾದಲ್ಲೂ ಹತ್ತು ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಯಾಕೆಂದರೆ, ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಬಾರತದಲ್ಲಲ್ಲ. ಇದು ವಾಸ್ತವ. ಅಲ್ಲಿಗೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅವರನ್ನು ಥಳಿಸಲಾಗುತ್ತೆ” ಎಂದು ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದರು.

ನ್ಯಾಯಮೂರ್ತಿಗಳ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಗಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ಗೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಹೈಕೋರ್ಟ್ ನ ರಿಸಿಸ್ಟ್ರಾರ್ ಜನರಲ್ ಗೆ ಸೂಚಿಸಿದೆ. ಈ ಬಗ್ಗೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

     

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page