July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ ಮಂಗಳವಾರ ಸಪ್ಟಂಬರ್ 24ರಂದು ಬಂಟ್ವಾಳ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತೀ ಸೌಧದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಮಧ್ಯ ವರ್ಜನ ಶಿಬಿರದ ಸಂಚಾಲಕ ಅರ್ಕ ಕೀರ್ತಿಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಅಕ್ಟೋಬರ್ 6ರಂದು ಬಂಟ್ವಾಳ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸುವುದೆಂದು, ತೀರ್ಮಾನಿಸಿ, ಕಾರ್ಯಕ್ರಮದ ವ್ಯವಸ್ಥೆಯ ಜವಾಬ್ದಾರಿಯನ್ನು ಹಂಚಲಾಯಿತು.

ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ತುಂಬೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರೊಫೆಸರ್ ತುಕಾರಾಮ ಪೂಜಾರಿ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ವಗ್ಗ ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಪೊಳಲಿ ವಲಯ ಮೇಲ್ವಿಚಾರಕಿ ಹರಿಣಾಕ್ಷಿ ಹಿಂದಿನ ಸಭೆಯ ವರದಿ ವಾಚಿಸಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕ್ರಷ್ಣ ಎಂ. ವಂದಿಸಿ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ  ಕಾರ್ಯಕ್ರಮ ನಿರೂಪಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page