July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ನೋಂದಣಿ ಮಾಡುವವರಿಗೆ ಸುವರ್ಣಾವಕಾಶ ಶನಿವಾರ ಮತ್ತು ಭಾನುವಾರ ರಜೆ ದಿನಗಳಲ್ಲೂ ಅವಕಾಶ ಕಲ್ಪಿಸಿದ ಸರಕಾರ

ರಾಜ್ಯದಲ್ಲಿ ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಉಪ ನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಆಸ್ತಿ ನೋಂದಣಿ, ವರ್ಗಾವಣೆ ಸೇರಿದಂತೆ ಎಲ್ಲ ನೋಂದಣಿಗಳನ್ನು ಈ ದಿನಗಳಲ್ಲೂ ನಿರ್ವಹಿಸಬಹುದು.

ಶನಿವಾರ ಮತ್ತು ಭಾನುವಾರ ನೋಂದಣಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಈ ಹಿಂದಿನಿಂದಲೇ ಇತ್ತು. ಇದರಿಂದ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಹಾಗೂ ಹೊರ ರಾಜ್ಯದಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲವಾಗಲಿದೆ. ಪ್ರತಿ ಜಿಲ್ಲೆಯಲ್ಲಿ ನಾಲ್ಕು ಅಥವಾ ಐದು ಉಪ ನೋಂದಣಿ ಕಚೇರಿಗಳಿದ್ದರೆ, ಒಂದು ಕಚೇರಿ ಮಾತ್ರ ಈ ಎರಡು ದಿವಸಗಳಲ್ಲಿ ಕಾರ್ಯನಿರ್ವಹಿಸಲಿವೆ. ರಜಾ ದಿನಗಳಲ್ಲಿ ಕಾರ್ಯನಿರ್ವಹಿಸಿದ ಕಚೇರಿಗಳಿಗೆ ಮಂಗಳವಾರ ರಜೆ ನೀಡಲಾಗುತ್ತದೆ.

ಸ್ವತ್ತು ನೋಂದಾಯಿಸಿಕೊಳ್ಳಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗಲೇ ಶನಿವಾರ ಮತ್ತು ಭಾನುವಾರ ನೋಂದಣಿ ಮಾಡಿಸಿಕೊಳ್ಳುವ ನಮೂದನ್ನು ಅರ್ಜಿದಾರನು ಮಾಡಬೇಕಾಗುತ್ತದೆ. ಯಾವ ಕಚೇರಿಗಳು ಶನಿವಾರ ಮತ್ತು ಭಾನುವಾರ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಆನ್‌ಲೈನ್‌ ಮೂಲಕವೇ ಸಾರ್ವಜನಿಕರಿಗೆ ತಿಳಿಸಲಾಗುವುದು. ಇದಕ್ಕಾಗಿ ಕಾನೂನಿನ ತಿದ್ದುಪಡಿಯನ್ನು ಮಾಡಿ ಸಚಿವ ಸಂಪುಟದ ಒಪ್ಪಿಗೆಯನ್ನು ಪಡೆಯಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಒಪ್ಪಿಗೆಯನ್ನೂ ಪಡೆಯಲಾಗಿದೆ. ಇನ್ನು ರಜೆ ದಿನಗಳಲ್ಲೂ ಆಸ್ತಿ ನೋಂದಣಿ ಖಾಸಗಿ ನೌಕರರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page