August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತರ ಕನಸು ನನಸು ಮಾಡಿದ ಸರಕಾರ : ಕಂದಾಯ ಇಲಾಖೆಯಿಂದ ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ: ಕೃಷಿ ಸಚಿವ ಕೃಷ್ಣ ಬೈರೇಗೌಡ ಇವರಿಂದ ಚಾಲನೆ

ಅಕ್ಟೋಬರ್ 01 : ದರ್ಖಾಸ್ತು ಜಮೀನು ಬಳಿಕ ಕೃಷಿ ಮಾಡುತ್ತಿರುವ ರೈತರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ರೈತರು ಕೃಷಿ ಕಾರ್ಯ ನಡೆಸುತ್ತಿರುವ ಸರ್ಕಾರಿ ಜಮೀನು, ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ ನೀಡಲು ಕಂದಾಯ ಇಲಾಖೆ ಮುಂದಾಗಿದೆ. ಬಹು ಕಾಲದ ರೈತರ ಕನಸು ಸರಕಾರ ನನಸು ಮಾಡಿದೆ.

ಈ ಕಾರ್ಯಕ್ಕೆ ನಾಳೆ ಅಕ್ಟೋಬರ್ 2ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇವರು ಹಾಸನ ಜಿಲ್ಲೆಯಲ್ಲಿ ಚಾಲನೆ ನೀಡಲಿದ್ದಾರೆ. ಪೋಡಿ ಭಾಗ್ಯ ಕಾರ್ಯಕ್ರಮದಿಂದ ದಶಕಗಳ ಹಿಂದೆ ಮಂಜೂರಾದ ಭೂಮಿ ಉಳುಮೆ ಮಾಡುತ್ತಿರುವ ಸುಮಾರು ಐದು ಲಕ್ಷ ರೈತರ ಸಂಕಷ್ಟ ನಿವಾರಣೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರಿ ಭೂಮಿಗಳ ಸಾಗುವಳಿ 59 ಸಾವಿರ ಸರ್ವೇ ನಂಬರ್‌ಗಳ ಪೋಡಿಗಾಗಿ ಅರ್ಹತಾ ಕಡತ ಸಿದ್ಧಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ದೊರೆತಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.

ಮೊದಲ ಹಂತದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ತಹಶೀಲ್ದಾರ್ ಮೊದಲಾದ ಕಂದಾಯ ಅಧಿಕಾರಿಗಳು ಅಕ್ಟೋಬರ್ 1ರಿಂದ 5ರ ವರೆಗೆ ಅರ್ಹತಾ ಕಡತ ಸಿದ್ಧಪಡಿಸುತ್ತಾರೆ. ಆ ನಂತರ ಸರ್ವೇ ಕಾರ್ಯ ನಡೆದು, ಜಮೀನಿನ ಪೋಡಿ ಕಾರ್ಯ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸರ್ವೇ ಇಲಾಖೆಯ ಉಪ ನಿರ್ದೇಶಕರಿಗೆ ಈ ಕಾರ್ಯದ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page