August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವಜಾತ ಶಿಶು ಮಾರಾಟ – ವೈದ್ಯೆ ಸೇರಿ 7 ಜನರ ಬಂಧನ

ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬರು, ತನ್ನ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ಹಸುಗೂಸನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 8 ವರ್ಷಗಳ ಕಾಲ ಮಕ್ಕಳಾಗದೆ ಕೊರಗುತ್ತಿದ್ದ ದಂಪತಿ 5 ಲಕ್ಷ ರೂಪಾಯಿಗೆ ಮಗುವನ್ನು ಖರೀದಿ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮಗು ಕೊಟ್ಟವರು, ಮಗು ಖರೀದಿ ಮಾಡಿದವರು, ಮಧ್ಯವರ್ತಿಗಳು, ವೈದ್ಯೆ ಸೇರಿ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಿದ್ದಾರೆ.

ವೈದ್ಯೆ ಡಾ. ಭಾರತಿ, ಶಿಶುವಿನ ತಾಯಿ ಕಾವ್ಯ, ಶಿಶು ಖರೀದಿಸಿದ್ದ ಜಯಾ ಹಾಗೂ ಪ್ರಶಾಂತ್‌ ಕುಮಾರ್‌ ದಂಪತಿ, ಮಧ್ಯವರ್ತಿಗಳಾದ ವಾದಿರಾಜ್‌, ಮಂಜಮ್ಮ ಬಂಧಿತರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ನವಜಾತ ಶಿಶುವೊಂದನ್ನು ರೂಪಾಯಿ 5 ಲಕ್ಷಕ್ಕೆ ಮಾರಾಟ ಮಾಡಲಾಗಿದ್ದು, ಪ್ರಕರಣ ಸಂಬಂಧ ದಾವಣಗೆರೆಯ ಮೆಮೋರಿಯಲ್ ಆಸ್ಪತ್ರೆಯ ವೈದ್ಯೆ ಡಾ. ‌ಭಾರತಿ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಆಗಸ್ಟ್ 26ರಂದು ಮಗುವಿನ ತಾಯಿ ಕಾವ್ಯ ಅವರು ತಮಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಈ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಸಬೂಬು ಹೇಳಿ ಮಾರಾಟ ಮಾಡಿದ್ದರು. ದಾವಣಗೆರೆ ದಂಪತಿ ಪ್ರಶಾಂತ ಕುಮಾರ್ ಹಾಗೂ ಜಯಾ ಎಂಬುವರು 5 ಲಕ್ಷ ಹಣ ನೀಡಿ ಮಗುವನ್ನು ಖರೀದಿಸಿದ್ದರು. ಮಗು ಮಾರಾಟಕ್ಕೆ ಟಿ. ವಾದಿರಾಜ್ ಹಾಗೂ ಮಂಜಮ್ಮ ಅಲಿಯಾಸ್ ಮಂಜುಳಾ ಎಂಬ ದಂಪತಿ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಸುಗೂಸಿನ ಮುಖ ನೋಡದೇ ಕಾವ್ಯ ಅವರು ಮಗು ಮಾರಾಟ ಮಾಡಿದ್ದರು. ಬಳಿಕ ಎಂ.ಕೆ. ಮೆಮೋರಿಯಲ್ ಆಸ್ಪತ್ರೆಯಲ್ಲಿ ಮಗು ಜನಿಸಿದ್ದು, ಈ ಮಗು ಪ್ರಶಾಂತ್ ಕುಮಾರ್ ಮತ್ತು ಜಯಾ ಅವರಿಗೆ ಜನಿಸಿದೆ ಎಂದು ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿದ್ದರು. ನಕಲಿ ದಾಖಲೆಗಳನ್ನು ನೀಡಿದ ಆರೋಪಿಗಳು ಮಹಾನಗರ ಪಾಲಿಕೆಯಲ್ಲಿ ಮಗುವಿನ ಜನನ ಪ್ರಮಾಣಪತ್ರ ಪಡೆದಿದ್ದರು‌. ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪ್ರಕರಣದ ಬಗ್ಗೆ ವಿವರಿಸಿದರು.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page