July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಞಾನದಿಂದ ಸುಜ್ಞಾನದೆಡೆಗೆ ಹಾದಿ ತೋರಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು – ರಾಜೇಶ್ ಸುವರ್ಣ

ಬಂಟ್ವಾಳ : ಅಗಾಧವಾದ ಧ್ಯಾನ ಶಕ್ತಿಯಿಂದ ಬುದ್ಧನಂತೆ ಕಂಗೊಳಿಸುತ್ತಿದ್ದ ನಾರಾಯಣಗುರುಗಳು ಜನರ ಅದರಲ್ಲೂ ಕೆಳಜಾತಿಗಳ ಆಕರ್ಷಣೆಯ ಕೇಂದ್ರ ಬಿಂದುವಾದರು. ತಾವು ಗಳಿಸಿದ ಅಪಾರವಾದ ಜ್ಞಾನ ಭಂಡಾರದಿಂದ ಜನರ ಅಜ್ಞಾನವ ಕಳೆದು ಸುಜ್ಞಾನವನಿತ್ತ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು.

ಅವರು ಅಕ್ಟೋಬರ್ 20ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ನಯನಾ ಜಯಾ  ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 16ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಮಾಜಿ ಅಧ್ಯಕ್ಷರಾದ, ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಲ್ಕೆ, ಮಲ್ಲಿಕಾ ಪಚ್ಚಿನಡ್ಕ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ,  ಜಗದೀಶ್ ತುಂಬೆ, ಅರ್ಜುನ್ ಅರಳ, ಸುಲತಾ ಬಿ.ಸಿ. ರೋಡ್ ಮತ್ತಿತರರು ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page