July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಅಕ್ಟೋಬರ್ 23ರಂದು ಬುಧವಾರ ಚಾಲನೆ ನೀಡಲಾಯಿತು.

ಜೆಸಿಐ ವಲಯ ತರಬೇತುದಾರ ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸಿ ಮಾತನಾಡಿ ದೂರದೂರುಗಳಿಂದ ಬರುವ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಯೋಜನೆ ಜಾರಿಗೊಳಿಸಿರುವುದು ಅಭಿನಂದನೀಯ. ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತುಕೊಂಡು ಯೋಜನೆ ಯಶಸ್ವಿಯಾಗಿ ಸಾಕಾರಗೊಳ್ಳಲು ಸಹಕರಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಸುಯೋಗ ವರ್ಧನ್ ಡಿ.ಎಂ. ಅವರು ಮಾತನಾಡಿ ಕೋವಿಡ್ ಬಳಿಕ ಕಾರಣಾಂತರಗಳಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಆಡಳಿತ ಮಂಡಳಿಯ ತೀರ್ಮಾನದಂತೆ ಈ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page