May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುದೀಪ್ ಕುಮಾರ್ ಶೆಟ್ಟಿ ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಸುದೀಪ್ ಕುಮಾರ್ ಶೆಟ್ಟಿ ಇವರು ಮಾಣಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಇಂದು ಅಕ್ಟೋಬರ್ 25ರಂದು ಅಧಿಕಾರ ಸ್ವೀಕರಿಸಿದರು. ಇವರು ಈ ಮೊದಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ. ಉಪಾಧ್ಯಕ್ಶರಾಗಿ ಸುಜಾತ ಪೂಜಾರಿಯವರು ಮುಂದುವರಿಯಲಿದ್ದಾರೆ.

ಬಂಟ್ವಾಳ ತಾಲೂಕು ಪ್ರಭಾರ ತಹಶೀಲ್ದಾರ್ ಅರವಿಂದ್ ಕೆ. ಎಮ್. ಇವರು ಚುನಾವಣಾಧಿಕಾರಿಯಾಗಿ ಆಗಮಿಸಿದ್ದರು. ಉಪ ತಹಶೀಲ್ದಾರ್ ನವೀನ್ ಕುಮಾರ್, ಮಾಣಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ತಾಲೂಕು ಪಂಚಾಯತ್ ಸಿಬ್ಬಂದಿ ಸಹಕರಿಸಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ, ಮಾಣಿ ಗಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಮಾಜಿ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸೀತಾ, ರಮಣಿ ಡಿ. ಪೂಜಾರಿ ಮತ್ತಿತರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page