August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಹಿತ್ಯ ತಾರೆ ಪ್ರಶಸ್ತಿಗೆ  ಆಯ್ಕೆಯಾದ ಬಂಟ್ವಾಳ ತಾಲೂಕಿನ ಓಜಾಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ಹಿರಿಯ ಪ್ರಾಥಮಿಕ ಶಾಲೆ  

ಬಂಟ್ವಾಳ : ಮಕ್ಕಳ ಕಲಾ ಲೋಕ ವತಿಯಿಂದ ನವಂಬರ್ 19ರಂದು ಬಂಟ್ವಾಳ ತಾಲೂಕಿನ ಶಂಭೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿರುವ  ಬಂಟ್ವಾಳ ತಾಲೂಕಿನ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿ ಮಕ್ಕಳ ಸಾಹಿತ್ಯಾದಿ ಕಲೆಗಳಲ್ಲಿ ತೊಡಗಿಸಿಕೊಂಡಿರುವ ಶಾಲೆಗೆ ನೀಡಲಾಗುವ ಸಾಹಿತ್ಯ ತಾರೆ ಪ್ರಶಸ್ತಿಗೆ ಓಜಾಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಲಾಗಿದೆ.

 ಕಳೆದ ಕೆಲವು ವರ್ಷಗಳಿಂದ ಶಾಲೆಯು ಸಾಹಿತ್ಯಾದಿ ಚಟುವಟಿಕೆಗಳನ್ನು ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುತ್ತಿರುವುದನ್ನು ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿದ್ದಾರೆ.

ದಾಖಲಾತಿ ಕುಸಿದು ಹದಿನೇಳು ಮಕ್ಕಳನ್ನು ಹೊಂದಿ ಮುಚ್ಚುವ ಸ್ಥಿತಿಗಿಳಿದಿದ್ದ ಓಜಾಲ ಶಾಲೆಯು ಇಂದು 131 ವಿದ್ಯಾರ್ಥಿಗಳಿಂದ ತುಂಬಿ ಕಂಗೊಳಿಸುತ್ತಿದೆ. ಕುಗ್ರಾಮವಾದರೂ ಶಾಲಾ ಶಿಕ್ಷಕರಲ್ಲದೆ, ಹೊರ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಮಕ್ಕಳಿಗೆ ಕಲೆ ಮತ್ತು ಸಾಹಿತ್ಯ ರಚನೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿಭಾ ದರ್ಪಣದ ಮೂಲಕ ಮಕ್ಕಳ ಸ್ವರಚಿತ ಸಾಹಿತ್ಯ, ಚಿತ್ರಗಳು ಪ್ರಕಟಗೊಳ್ಳುತ್ತಿವೆ. ಗುಬ್ಬಚ್ಚಿ ಸಾಹಿತ್ಯ ಸಂಘದ ಮೂಲಕ ಮಕ್ಕಳ ಸ್ವರಚಿತ ಸಾಹಿತ್ಯದ ವಾರ್ಷಿಕ ಹಸ್ತಪತ್ರಿಕೆ ಚಿಣ್ಣರ ಚಿತ್ತಾರ ಶಾಲಾ ವಾರ್ಷಿಕೋತ್ಸವದಂದು ನಿರಂತರವಾಗಿ ಬಿಡುಗಡೆಯಾಗುತ್ತಿದೆ. ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವೂ ಈ ಶಾಲೆಯಲ್ಲಿ ಜರಗಿರುವುದನ್ನು ಸ್ಮರಿಸಬಹುದು. ಓಜಾಲದ ಓಜ, ಆಶಯ, ನೆಲ ಜಲ, ಜಗದ ನಿಯಮ, ಜ್ಞಾನಾಮೃತ ಮೊದಲಾದ ಮಕ್ಕಳ ಕೃತಿಗಳನ್ನು ಈ ಶಾಲೆಯಲ್ಲಿ ಮುದ್ರಿಸಿ ಪ್ರಕಟಿಸಲಾಗಿರುವುದು ಓಜಾಲ ಶಾಲೆಯ ಹೆಗ್ಗಳಿಕೆ ಎಂದು ಬಾಯಾರ್ ತಿಳಿಸಿದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page