August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸ ಕೊಠಡಿ ಕಾರ್ಯರಂಭ

ಮಂಗಳೂರು ನವಂಬರ್ 8 : ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಬುಧವಾರದಿಂದ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ. ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ. ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ. ಹೇಮಲತಾ ಹಾಗೂ ಡಾ. ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ. ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ. ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.

ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನರ್ಸಿಂಗ್ ಅಧಿಕಾರಿಗಳಾದ ಶೈಲಾ, ಜೆಸಿಂತ, ಅಶ್ವಿನಿ, ರೇಷ್ಮಾ, ಆಲ್ವಿನ್ ಮಿನೇಜಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶೃದ್ಧಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು. ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.


ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page