August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸ್ವ – ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನವಂಬರ್ 14ರಂದು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರಗಿತು.

ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಬಾರ್ಡ್ ಅಧ್ಯಕ್ಷ ಶಾಜಿ ಕೆ. ವಿ., ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.

 

ಅರ್ಹ ಸ್ವಸಹಾಯ ಸಂಘಗಳಿಗೆ ರೂಪಾಯಿ 605 ಕೋಟಿ ಲಾಭಾಂಶ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್ ಅಧಿಕಾರಿಗಳು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.

ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಾಂತಾರಾಮ್ ಆರ್. ಪೈ, ಪ್ರವೀಣ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ನಿರೂಪಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page