August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಜಮಾಡಿ ಯುವವಾಹಿನಿ ಘಟಕ ತುಳು ವೆರೆ ತುಳಸಿ ಪರ್ಬ

ಯುವ ವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವಂಬರ್ 13ರಂದು ತುಳುವರೇ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ ಸುಖೀರ್ಥ ಆಚಾರ್ಯ, ಉಡುಪಿಯ ಯುವ ನ್ಯಾಯವಾದಿ ಹಂಜತ್ ಹೆಜಮಾಡಿ ಕೋಡಿ, ಮುಲ್ಕಿಯ ಉನ್ನತಿ ಕ್ರಿಶ್ಚಿಯನ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರೋಷನ್ ವಿಜಯ ಫುರ್ಟಾಡೊ, ಯುವ ವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿವೇಕ್ ಬಿ. ಮುಂತಾದವರು ಆಗಮಿಸಿದರು.

ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಥಮೇಶ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ ಸ್ವಾಗತಿಸಿದರು.  ಯುವವಾಹಿನಿ ಹೆಜಮಾಡಿ ಘಟಕದ ಸ್ಥಾಪಕ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಪ್ರಸ್ತಾವನೆ ಗೈದರು. ಪ್ರಾಪ್ತಿಯವರು ವಂದಿಸಿದರು. ಮನೋಹರ ಹೆಜಮಾಡಿ ಮತ್ತು ಧೀರಜ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.

ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾಮನ ಕೋಟ್ಯಾನ್ ನಡಿಕುದ್ರು ಇವರನ್ನು ಗೌರವಿಸಲಾಯಿತು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page