May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಬುಡೋಳಿ ಆಶ್ರಫ್ ಕರಾವಳಿ  ನಿಧನ

ಬಂಟ್ವಾಳ: ಮಾಣಿ ಸಮೀಪದ ಬುಡೋಳಿ ನಿವಾಸಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಆಶ್ರಫ್ ಕರಾವಳಿ (52) ಹೃದಯಾಘಾತದಿಂದ ಇಂದು ನವಂಬರ್ 15ರಂದು ಶುಕ್ರವಾರ ಮಧ್ಯಾಹ್ನ ನಿಧನರಾದರು.

ಅಶ್ರಫ್ ಅವರು ಶುಕ್ರವಾರದ ನಮಾಜಿಗೆ ಗಡಿಯಾರ ಮಸೀದಿಗೆ ತೆರಳಿದ್ದು, ನಮಾಜ್ ನಿರ್ವಹಿಸಿ ಮಸೀದಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಶ್ರಫ್ ಅವರು ಬುಡೋಳಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅದ್ಯಕ್ಷರಾಗಿದ್ದಾರೆ. ಗಡಿಯಾರ ಜುಮಾ ಮಸೀದಿ, ಕಲ್ಲಡ್ಕ ರೇಂಜ್ ಮದ್ರಸ ಮೆನೇಜ್ ಮೆಂಟ್ ಇದರ ಕಾರ್ಯದರ್ಶಿಯಾಗಿ ಹಾಗೂ ಇನ್ನಿತರ ಧಾರ್ಮಿಕ ಮತ್ತು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು, ತಂದೆ ಸುಲೈಮಾನ್ ಸಹಿತ 7 ಮಂದಿ  ಸಹೋದರರು, ಓರ್ವ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page