May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈ ವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು.

 

ಶಿಫಾರಸಿನಲ್ಲಿ ಸಾಧಕರ ಹೆಸರು, ಫೋಟೋ, ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮಾಹಿತಿಗಳಿರಬೇಕು. ಶಿಫಾರಸು ಪತ್ರದೊಂದಿಗೆ ಸಾಧಕರ ಸಾಧನೆಯ ಬಗ್ಗೆ 200 ಶಬ್ದಗಳಿಗೆ ಮೀರದಂತೆ ಪರಿಚಯ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ 2024ರ ನವೆಂಬರ್ 30ರೊಳಗಾಗಿ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಈ ವಿಳಾಸಕ್ಕೆ ಕಳುಹಿಸಬೇಕು. ಒಬ್ಬರಿಗೆ ಇಬ್ಬರು ಸಾಧಕರನ್ನು ಶಿಫಾರಸು ಮಾಡುವ ಅವಕಾಶ ಇದೆ. ತಜ್ಞರ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಪ್ರೆಸ್ ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page