May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನ ಜಾಗೃತಿ ಕಾರ್ಯಕ್ರಮ

ಮಂಗಳೂರು ನವಂಬರ್ 20 : ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮವನ್ನು ನವಂಬರ್ 14ರಂದು ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಎ.ಜೆ. ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ| ಪ್ರಣಮ್ಯ ಜೈನ್ ಅವರು ಮಧುಮೇಹ ಮತ್ತು ಇದರ ಕಾರಣಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಡಾ| ಲಾರಿಸ್ಸಾ ಮಾರ್ಥ ಸಾಮ್ಸ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ರಮ್ಯಾ ಅವರು ದಿನದ ಧೈಯದ ಬಗ್ಗೆ ವಿವರಿಸಿದರು. ಬಿ.ಎಸ್.ಸಿ ನಾಲ್ಕನೇ ಸೆಮಿಸ್ಟರ್ ನರ್ಸಿಂಗ್ ವಿದ್ಯಾರ್ಥಿಗಳು ಮಧುಮೇಹ ತಡೆಗಟ್ಟುವಿಕೆಯ ಕುರಿತಾದ ಕಿರು ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿನಿ ಶಾಲನ್ ರಿಯಾ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಮಧುಮೇಹ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಭಿತ್ತಿಪತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page