May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ

ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು  ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ನವಂಬರ್ 21ರಂದು ಗುರುವಾರ ನಡೆಯಿತು.


ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು, ಖಜಾಂಜಿ ಪುಷ್ಪರಾಜ್ ಬಿ.ಎನ್., ಯಶೋಧರ ಕೋಟ್ಯಾನ್, ಹರೀಶ್ ಮೋಟುಕಾನ ನುಡಿ ನಮನ ಸಲ್ಲಿಸಿದರು. ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಹರೀಶ್ ಕುಲ್ಕುಂದ,  ಶಂಶೀರ್ ಬುಡೋಳಿ ಮುಂತಾದವರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page