May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 21ನೇ ಮಾಲಿಕೆ

ನಾರಾಯಣಗುರುಗಳ ಜನಪರ ಕಾಳಜಿ ಯುವಕರಿಗೆ ಸ್ಪೂರ್ತಿ – ಪ್ರಜಿತ್ ಅಮೀನ್

ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ. ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು ತಲಶ್ಯೇರಿಯದಲ್ಲಿ ಗುರುಗಳು ಜೀವಂತವಿರುವಾಗಲೆ ಅವರ ಶಿಷ್ಯರು ಪ್ರತಿಷ್ಟಾಪಿಸಿದ ಪಂಚಲೋಹದ ಮೂರ್ತಿಯನ್ನು ನೋಡಿ ಗುರುಗಳು ಅಭಿಪ್ರಾಯ ಪಟ್ಟರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ತಿಳಿಸಿದರು.

ಅವರು ನವಂಬರ್ 21ರಂದು ಗುರುವಾರ  ಬಂಟ್ಟಾಳ ತಾಲೂಕಿನ ವಗ್ಗ ನಿವೇದಿತಾ ಜಗದೀಶ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 21ರಲ್ಲಿ ಗುರುಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಧನುಷ್ ಮಧ್ವ, ಮಧುಸೂದನ್ ಮಧ್ವ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕೆ., ಅರುಣ್ ಕುಮಾರ್, ಸದಸ್ಯರಾದ ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಸುದೀಪ್ ರಾಯಿ, ಯತೀಶ್ ಬೊಳ್ಳಾಯಿ, ಯಶೋಧರ ಕಡಂಬಳಿಕೆ ಮತ್ತಿತರರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page