April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

 CPIM ದಕ್ಷಿಣ ಕನ್ನಡ ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

CPIM 24ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಇತ್ತೀಚಿಗೆ ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಮ್ಮೇಳನಕ್ಕೆ ಮಾರ್ಗದರ್ಶಕರಾಗಿ CPIM ಪೋಲಿಟ್ ಬ್ಯೂರೋ ಸದಸ್ಯರಾದ ಎಂ.ಎ. ಬೇಬಿ, CPIM ರಾಜ್ಯ ಕಾರ್ಯದರ್ಶಿ ಬಸವರಾಜ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.ಕೆ. ಪ್ರಕಾಶ್ ರವರು ಭಾಗವಹಿಸಿದ್ದರು. ಸಮ್ಮೇಳನದ ಉದ್ಘಾಟನಾ ಸಮಾರಂಭ, ಪ್ರತಿನಿಧಿ ಅಧಿವೇಶನ, ಸಮಾರೋಪ ಸಮಾರಂಭ, ಆಕರ್ಷಕ ಮೆರವಣಿಗೆ ಹಾಗೂ ಬಹಿರಂಗ ಸಭೆಯು ಅಚ್ಚುಕಟ್ಟಾಗಿ ನಡೆಯಿತು. ಈ ಸಮ್ಮೇಳನವು ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.

 ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳರವರು ಸರ್ವಾನುಮತದಿಂದ ಆಯ್ಕೆಗೊಂಡರೆ, ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ. ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ. ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್, ಬಿ.ಎಂ. ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು.

 ನೂತನ ಜಿಲ್ಲಾ ಸಮಿತಿ ಸದಸ್ಯರಾಗಿ ಜಯಂತ ನಾಯ್ಕ್, ರಮಣಿ ಮೂಡಬಿದ್ರೆ, ಯೋಗೀಶ್ ಜಪ್ಪಿನಮೊಗರು, ಬಿ.ಕೆ. ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ವಸಂತಿ ಕುಪ್ಪೆಪದವು, ರಫೀಕ್ ಹರೇಕಳ, ಪ್ರಮೀಳಾ ಶಕ್ತಿನಗರ, ರಾಧಾ ಮೂಡಬಿದ್ರೆ, ಈಶ್ವರೀ ಬೆಳ್ತಂಗಡಿಯವರನ್ನು ಆರಿಸಲಾಯಿತು. ನೂತನ ಜಿಲ್ಲಾ ಸಮಿತಿಗೆ ಶೇಖರ್ ಕುಂದರ್ ಕುತ್ತಾರ್ ರವರು ಖಾಯಂ ಆಹ್ವಾನಿತರಾಗಿ ಆಯ್ಕೆಗೊಂಡರೆ, ಜೆ. ಬಾಲಕ್ರಷ್ಣ ಶೆಟ್ಟಿಯವರನ್ನು ವಿಶೇಷ ಆಹ್ವಾನಿತರನ್ನಾಗಿ ಆಯ್ಕೆಗೊಳಿಸಲಾಯಿತು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page