September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆಯಲ್ಲಿ ವಿಮೆ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ನೋಂದಾವಣಿ ಶಿಬಿರ‌ ತುಂಬೆ ಬೊಳ್ಳಾರಿಯ ಸಂಘದ ಕಚೇರಿಯಲ್ಲಿ ನವಂಬರ್ 24ರಂದು ಭಾನುವಾರ ನಡೆಯಿತು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಶಿಬಿರ ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಬಳಿಕ ಮಾತನಾಡಿ ‘ಜನರ ಉಪಯೋಗಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಮಾಹಿತಿಯ ಕೊರತೆಯಿಂದ‌ ಅನೇಕ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ಸಿಗಲು ಸಾಧ್ಯವಿದೆ’ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ತುಂಬೆ ಗ್ರಾಮ ಪಂಚಾಯತಿ ಸದಸ್ಯ ಕಿಶೋರ್, ಮಹಿಳಾ ಸಂಘದ ಅಧ್ಯಕ್ಷೆ ಜಲಜಾಕ್ಷಿ, ಗೌರವಾಧ್ಯಕ್ಷೆ ಪಾರ್ವತಿ ಐತಪ್ಪ ಕುಲಾಲ್, ಅಧ್ಯಕ್ಷ‌ ಚೆನ್ನಕೇಶವ, ಗ್ರಾಮ 1 ವ್ಯವಸ್ಥಾಪಕ ರಂಜಿತ್, ಪಂಚಾಯತಿನ ಮಾಜಿ ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಸಂಘದ ಕಾರ್ಯದರ್ಶಿ ಪ್ರವೇಶ್ ಕುಮಾರ್ ಉಪಸ್ಥಿತರಿದ್ದರು. ಸಂಚಾಲಕ ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page