July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂಸ್ಥೆಯ ಸ್ಥಾಪಕರ ಶ್ರಮದ ಸ್ಮರಣೆ ಅಗತ್ಯ – ಮಾಜಿ ಶಾಸಕ ಸಂಜೀವ ಮಠoದೂರು

ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಇಂದು ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ ಸಾಧನೆ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಶಾಲೆಯ ಸ್ಥಾಪನೆಗೆ ಅಂದು ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆ ಮತ್ತು ಅಧ್ಯಾಪಕ ವೃಂದದ ಶ್ರಮವನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠoದೂರು ತಿಳಿಸಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿ ಶಾಲಾ ಅಭಿವೃದ್ಧಿಗೆ ಶ್ರಮಿಸಿದ್ದು ಮುಂದಕ್ಕೂ ತನ್ನ ಸಹಕಾರವಿದೆ. ಹಿರಿಯ ವಿದ್ಯಾರ್ಥಿ ಸಂಘವು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಿ ರಾಜ್ಯದಲ್ಲಿ ಕೀರ್ತಿಯನ್ನು ತರುವಂತಹ ಸಾಧನೆ ಮಾಡಲಿಯೆಂದು ಹಾರೈಸಿದರು. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘವನ್ನು ರಚಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲವರ್ಧನಗೊಳಿಸುವ ಆಶಯವನ್ನು ಹೊಂದಿದೆ. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿಯಾಗಿದ್ದು ಪ್ರತಿವರ್ಷದ ವಿದ್ಯಾರ್ಥಿಗಳನ್ನು ವಾಟ್ಸಪ್ ಗುಂಪುಗಳಲ್ಲಿ ಸೇರಿಸುವ, ಸದಸ್ಯತ್ವ ಅಭಿಯಾನದ ಮೂಲಕ ಸಂಸ್ಥೆಯ ಜೊತೆಗಿನ ಸಂಬಂಧವನ್ನು ಹೆಚ್ಚಿಸಬೇಕೆಂದು ನಿವೃತ್ತ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತವಿಕ ಮಾತುಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ. ಅಧ್ಯಕ್ಷ ಗುಣವತಿ, ಸದಸ್ಯರಾದ ಜೆ.ಕೆ. ಪೂಜಾರಿ, ಜಯಂತಿ, ಅಬ್ದುಲ್ ಮಜೀದ್, ಅಬೂಬಕ್ಕರ್ ಸಿದ್ದಿಕ್, ಅಬ್ದುಲ್ ರಶೀದ್ ಮಠ, ಖಲಂದರ್ ಶಾಫಿ, ಸಾಮಾಜಿಕ ಮುಂದಾಳು ಎನ್. ಉಮೇಶ ಶೆಣೈ ರಾಮನಗರ, ರೋಟರಿ ಅಧ್ಯಕ್ಷ ನವೀನ್ ಬ್ರ್ಯಾಗ್ಸ್, ಝಕಾರಿಯ ಕೋಡಿಪ್ಪಾಡಿ, ಚಂದ್ರಶೇಖರ ಮಡಿವಾಳ, ಅಬೂಬಕ್ಕರ್ ಸಿದ್ದೀಕ್ ಹ್ಯಾಪಿ ಟೈಮ್ಸ್, ರಘುರಾಮ, ರಾಜೇಶ್ ರಾಮನಗರ ಮೊದಲಾದ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಸರ್ವಾನುಮತದಿಂದ ಹಿರಿಯ ವಿದ್ಯಾರ್ಥಿ ಸಂಘಕ್ಕೆ  ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪ ಪ್ರಾಂಶುಪಾಲ ದೇವಕಿ ಡಿ. ಸ್ವಾಗತಿಸಿ ಹಿರಿಯ ಶಿಕ್ಷಕಿ ಪೂರ್ಣಿಮಾ ನಾಯಕ್ ವಂದಿಸಿದರು. ಶಿಕ್ಷಕ ಲಕ್ಷ್ಮೀಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page