September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ ಚುನಾವಣೆ ಬಂಟ್ವಾಳ ಪುರಸಭೆ ಹಾಗೂ ಗ್ರಾಮ ಪಂಚಾಯತ್ ನ 11 ಸ್ಥಾನಗಳ ಪೈಕಿ 9ರಲ್ಲಿ ಕಾಂಗ್ರೆಸ್ ಮೇಲುಗೈ

ಬಂಟ್ವಾಳ : ತಾಲೂಕಿನ ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನವಂಬರ್ 23ರಂದು ಮತದಾನ ನಡೆದಿದ್ದು, ಮಂಗಳವಾರ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌ ಮೇಲುಗೈ ಸಾಧಿಸಿ ಗೆಲುವಿನ ನಗೆ ಬೀರಿದರೆ, ಬಿಜೆಪಿ ಒಂದು ಸ್ಥಾನ ಕಳೆದುಕೊಂಡಿದ್ದು, ಎಸ್.ಡಿ.ಪಿ.ಐ. ಎಲ್ಲಾ ಸ್ಥಾನವನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿದೆ.

ಪುರಸಭೆಯ 2ನೇ ವಾರ್ಡ್ ನ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುರುಷೋತ್ತಮ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಅವರ ವಿರುದ್ದ ಸುಮಾರು 40 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಿವಿಧ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ  9 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಜಯ ಸಾಧಿಸಿದರೆ 2 ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಎಸ್.ಡಿ.ಪಿ.ಐ. ತನ್ನ ವಶದಲ್ಲಿದ್ದ ಸ್ಥಾನವನ್ನು ಕಳೆದುಕೊಂಡಿದೆ.

ಬಂಟ್ವಾಳ ಪುರಸಭೆಯಲ್ಲಿ ಪುರುಷೋತ್ತಮ ಪೂಜಾರಿ, ಸಜೀಪ ಮೂಡ ಗ್ರಾಮ ಪಂಚಾಯತ್ ಕರೀಂ, ಪಂಜಿಕಲ್ಲು ಕೇಶವ, ರಾಜೇಶ್ ಗೌಡ, ಬಡಗಬೆಳ್ಳೂರು ಮೋಹನ್ ದಾಸ ಕೊಟ್ಟಾರಿ, ಅಮ್ಟಾಡಿ ಕೇಶವ ಜೋಗಿ, ಕೊಡಂಬೆಟ್ಟು ಜಯಂತಿ ಸತೀಶ್ ಪೂಜಾರಿ, ಮಂಚಿ ರಾಜೇಶ್ ನೂಜಿಪ್ಪಾಡಿ, ಸಜೀಪ ಮುನ್ನೂರು ಇಸ್ಮಾಯಿಲ್ ನಂದಾವರ ಕೋಟೆ, ಧನಂಜಯ ಶೆಟ್ಟಿ ಮರ್ತಾಜೆ, ಸೆಲಿನಾ ಡಿಸೋಜ ಹಾಗೂ ಬಿಳಿಯೂರು ನಳಿನಿ ಅವರು ವಿಜೇತರಾಗಿದ್ದಾರೆ.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page